ಪೊಲೀಸರು ಶಾಸಕರ ಕರೆ ಸ್ವೀಕರಿಸುವುದು ಕಡ್ಡಾಯ

Published : Mar 10, 2026, 07:08 AM IST
Karnataka police

ಸಾರಾಂಶ

ಶಾಸಕರು ಹಾಗೂ ಸಂಸದರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು, ಆ ಜನಪ್ರತಿನಿಧಿಗಳ ಕರೆಗಳಿಗೆ ಪ್ರತಿಕ್ರಿಯಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ। ಎಂ.ಎ.ಸಲೀಂ ಸೂಚಿಸಿದ್ದಾರೆ.

 ಬೆಂಗಳೂರು :  ಶಾಸಕರು ಹಾಗೂ ಸಂಸದರ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು, ಆ ಜನಪ್ರತಿನಿಧಿಗಳ ಕರೆಗಳಿಗೆ ಪ್ರತಿಕ್ರಿಯಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ। ಎಂ.ಎ.ಸಲೀಂ ಸೂಚಿಸಿದ್ದಾರೆ.

ಸುತ್ತೋಲೆ ಹೊರಡಿಸಿರುವ ಡಿಜಿಪಿ

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಡಿಜಿಪಿ ಅ‍ವರು, ಜನಪ್ರತಿನಿಧಿಗಳ ಕರೆಗಳಿಗೆ ಸ್ಪಂದಿಸುವಂತೆ ಹೇಳಿದ್ದಾರೆ. ಜನಪ್ರತಿನಿಧಿಗಳಾದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರ ದೂರವಾಣಿಯನ್ನು ಕಡ್ಡಾಯವಾಗಿ ಇಟ್ಟುಕೊಳ್ಳುವಂತೆ ಹಾಗೂ ಆ ಜನಪ್ರತಿನಿಧಿಗಳು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.

ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ಸುತ್ತೋಲೆಯಲ್ಲಿ ಸೂಚನೆ

ಜನಪ್ರತಿನಿಧಿಗಳು ಕರೆ ಮಾಡಿದಾಗ ಒಂದು ವೇಳೆ ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಕರ್ತವ್ಯ ಮುಗಿದ ಬಳಿಕ ಮರು ಕರೆ ಮಾಡಬೇಕು. ಈ ಮೂಲಕ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಇತ್ತೀಚೆಗೆ ಪೊಲೀಸ್ ಅಧಿಕಾರಿಗಳು ತಮ್ಮ ಕರೆ ಸ್ವೀಕರಿಸದೆ ಉದಾಸೀನತೆ ತೋರುತ್ತಿದ್ದಾರೆ ಎಂದು ಕೆಲ ಶಾಸಕರು ಹಾಗೂ ಸಂಸದರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರವು ಡಿಜಿಪಿ ಅವರ ಗಮನಕ್ಕೆ ಬಂದಿತ್ತು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಮಕ್ಕಳಿಗೆ ಶಿಸ್ತು, ಸಂಸ್ಕಾರ ಕಲಿಸಿದರೆ ಸದೃಢ ಸಮಾಜ ಸಾಧ್ಯ
ತ್ಯಾಮಗೊಂಡ್ಲು ಗ್ರಾಪಂ ಪಿಡಿಒ ವಿರುದ್ಧ ಸದಸ್ಯರ ಪ್ರತಿಭಟನೆ