ಪೂರ್ವ ಮುಂಗಾರಿನಲ್ಲಿ ಬಿತ್ತನೆ ಭಾರೀ ಪ್ರಮಾಣದಲ್ಲಿ ಕುಂಠಿತ

Published : Jun 11, 2026, 11:41 AM IST
Farmer

ಸಾರಾಂಶ

ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಪೂರ್ವ ಮುಂಗಾರಿನ ಬಿತ್ತನೆ ಪ್ರಮಾಣದಲ್ಲಿ ಭಾರೀ ಕುಂಠಿತವಾಗಿದೆ. ಒಟ್ಟಾರೆ 2.78 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಇಲಾಖೆ ಬಿತ್ತನೆ ಗುರಿ ಹೊಂದಿದ್ದು, ಆದರೆ 1.62 ಲಕ್ಷ ಹೆಕ್ಟೇರ್‌ನಲ್ಲಿ(ಶೇ.58) ಮಾತ್ರ ಬಿತ್ತನೆಯಾಗಿದೆ.

  ಬೆಂಗಳೂರು :  ಮಳೆ ಅಭಾವದಿಂದಾಗಿ ರಾಜ್ಯದಲ್ಲಿ ಪೂರ್ವ ಮುಂಗಾರಿನ ಬಿತ್ತನೆ ಪ್ರಮಾಣದಲ್ಲಿ ಭಾರೀ ಕುಂಠಿತವಾಗಿದೆ. ಒಟ್ಟಾರೆ 2.78 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಇಲಾಖೆ ಬಿತ್ತನೆ ಗುರಿ ಹೊಂದಿದ್ದು, ಆದರೆ 1.62 ಲಕ್ಷ ಹೆಕ್ಟೇರ್‌ನಲ್ಲಿ(ಶೇ.58) ಮಾತ್ರ ಬಿತ್ತನೆಯಾಗಿದೆ.

51 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ

51 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ ಇತ್ತಾದರೂ 38 ಸಾವಿರ ಹೆಕ್ಟೇರ್‌ನಲ್ಲಿ (ಶೇ.74) ಮಾತ್ರ ಬಿತ್ತನೆಯಾಗಿದೆ. ಒಟ್ಟಾರೆ 1.51 ಲಕ್ಷ ಹೆಕ್ಟೇರ್‌ನಲ್ಲಿ ಆಹಾರ ಧಾನ್ಯ ಬಿತ್ತನೆ ಅಂದಾಜಿದ್ದು. ಇದಕ್ಕೆ ಬದಲಾಗಿ 77 ಸಾವಿರ ಹೆಕ್ಟೇರ್‌(ಶೇ.51)ನಲ್ಲಿ ಬಿತ್ತನೆಯಾಗಿದೆ. ಸೂರ್ಯಕಾಂತಿ, ಶೇಂಗಾ ಸೇರಿ 26 ಸಾವಿರ ಹೆಕ್ಟೇರ್‌ನಲ್ಲಿ ಎಣ್ಣೆಕಾಳುಗಳ ಬೆಳೆ ಬೆಳೆಯುವ ಅಂದಾಜಿತ್ತು. ಆದರೆ, 16 ಸಾವಿರ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿ ಶೇ.42 ರಷ್ಟು ಸಾಧನೆಯಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ 16 ಸಾವಿರ ಹೆಕ್ಟೇರ್‌ ಬಿತ್ತನೆ ಗು

ಪೂರ್ವ ಮುಂಗಾರಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 16 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿ ಇದ್ದು, 28 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿ ಶೇ.175 ರಷ್ಟು ಸಾಧನೆಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್‌(ಶೇ.71), ಚಾಮರಾಜನಗರ 28 ಸಾವಿರ ಹೆಕ್ಟೇರ್‌(ಶೇ.55), ಮೈಸೂರಿನ 1.63 ಲಕ್ಷ ಹೆಕ್ಟೇರ್‌ ಗುರಿ ಪೈಕಿ ಶೇ.54 ರಷ್ಟು ಬಿತ್ತನೆಯಾಗಿದೆ. ಆದರೆ ಇನ್ನುಳಿದ ಜಿಲ್ಲೆಗಳಲ್ಲಿ ಬಿತ್ತನೆ ಬಹಳಷ್ಟು ಕಡಿಮೆಯಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

15ರ ವರೆಗೆ ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ
17 ಜಿಲ್ಲೆಯಲ್ಲಿ 1.1 ಲಕ್ಷ ಜನ ಗೃಹಲಕ್ಷ್ಮಿ ಸ್ಕೀಂನಿಂದ ಔಟ್‌