ಮೋದಿ ರಸ್ತೆ ಮಾರ್ಗದಲ್ಲಿ ಜನರಿಗೆ ದರ್ಶನ, ಮೆಟ್ರೋದಲ್ಲಿ ಸಂಚಾರ

Published : Aug 10, 2025, 06:26 AM IST
Modi

ಸಾರಾಂಶ

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿ ಬಳಿಕ ಹೆಲಿಕಾಪ್ಟರ್‌ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11ಕ್ಕೆ ರೈಲು ನಿಲ್ದಾಣಕ್ಕೆ ಬರಲಿದ್ದಾರೆ.

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭಾನುವಾರ ಆಗಮಿಸಲಿದ್ದು, ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿ ಬಳಿಕ ಹೆಲಿಕಾಪ್ಟರ್‌ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್‌) ರೈಲು ನಿಲ್ದಾಣಕ್ಕೆ ಬರಲಿದ್ದಾರೆ. ಮೂರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಮೆಟ್ರೋ ರೈಲಲ್ಲಿ ಪ್ರಯಾಣ:

ನಂತರ ಮೋದಿ ಅವರು ಬೆಳಗ್ಗೆ 11.30ಕ್ಕೆ ರಸ್ತೆ ಮಾರ್ಗವಾಗಿ ಆರ್‌.ವಿ.ರಸ್ತೆಯ ಮೆಟ್ರೋ ನಿಲ್ದಾಣ ತಲುಪಿ ಬೆಳಗ್ಗೆ 11.45ಕ್ಕೆ ಆರ್‌.ವಿ.ರಸ್ತೆಯ ರಾಗೀಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಮಧ್ಯಾಹ್ನ 12.55ಕ್ಕೆ ಆರ್‌.ವಿ.ರಸ್ತೆಯ(ರಾಗೀಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ಮೋದಿ ಭಾಷಣ:

ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿಸಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ವೇದಿಕೆಯಲ್ಲಿ 10 ಮಂದಿಗೆ ಅವಕಾಶ:

ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯಪಾಲ ತಾವರ್‌ ಚಂದ್‌ ಗೆಹಲೋತ್‌, ಕೇಂದ್ರ ಸಚಿವರಾದ ಮನೋಹರ್‌ ಲಾಲ್‌, ಅಶ್ವಿನಿ ವೈಷ್ಣವ್‌, ಶೋಭಾ ಕರಂದ್ಲಾಜೆ, ಎಚ್‌.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಂಸದ ತೇಜಸ್ವಿ ಸೂರ್ಯ, ಸಂಸದ ಸಿ.ಎನ್‌. ಮಂಜುನಾಥ್‌ ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.

PREV
Read more Articles on

Recommended Stories

ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ
12.69 ಲಕ್ಷ ಶಂಕಾಸ್ಪದ ಬಿಪಿಎಲ್‌ ಚೀಟಿ ರಾಜ್ಯದಲ್ಲಿ ಪತ್ತೆ: ಮುನಿಯಪ್ಪ