ರೈತರ ಭೂಮಿ ರಕ್ಷಣೆ 6ನೇ ಗ್ಯಾರಂಟಿ : ಡಿಕೆ

Published : Nov 01, 2026, 10:56 AM IST
DK Shivakumar

ಸಾರಾಂಶ

ರೈತರ ಜಮೀನನ್ನು ರಕ್ಷಿಸಲು ಭೂಮಿ ಯೋಜನೆ ಮೂಲಕ ಆರನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.ಮಂಡ್ಯದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಂಡ್ಯ ; ರೈತರ ಜಮೀನನ್ನು ರಕ್ಷಿಸಲು ಭೂಮಿ ಯೋಜನೆ ಮೂಲಕ ಆರನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಮಂಡ್ಯದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮಂಡ್ಯದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ರೈತರ ಜಮೀನುಗಳು ಪೌತಿ ಖಾತೆ ಆಗಿಲ್ಲ. ಇ-ಸ್ವತ್ತು ಸೇರಿದಂತೆ ಹಲವು ಸಮಸ್ಯೆಗಳನ್ನು ನಾನೂ ಸ್ವತಃ ರೈತನಾಗಿ ಅರಿತಿದ್ದೇನೆ. ಹಾಗಾಗಿ ಪೋಡಿ, ಇ-ಸ್ವತ್ತು, ಇ-ಖಾತೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಮಾಡಿ ರೈತರ ಜಮೀನುಗಳನ್ನು ಸಂರಕ್ಷಿಸುವ ಮೂಲಕ ಅವರ ಕುಟುಂಬಕ್ಕೆ ಆಧಾರವಾಗಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಮೇಕೆದಾಟು ಯೋಜನೆಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಶೀಘ್ರವೇ ನಾವು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ನಮ್ಮ ನೀರು ನಮ್ಮ ಹಕ್ಕನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಆ ಜವಾಬ್ದಾರಿಯನ್ನು ಚಲುವರಾಯಸ್ವಾಮಿ ಅವರಿಗೆ ವಹಿಸಿದ್ದೇವೆ ಎಂದರು.

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಈಗಾಗಲೇ 2,500 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಇದರಲ್ಲಿ ರೈತರ ಖಾಸಗಿ ಜಮೀನು ಕೇವಲ 500 ಎಕರೆ ಮಾತ್ರ ಭೂಸ್ವಾಧೀನವಾಗಲಿದೆ. ಮೇಕೆದಾಟು ಯೋಜನೆಯಿಂದ ಕಾವೇರಿ ನೀರಿನ ನಿರ್ವಹಣೆಗೆ ದೊಡ್ಡ ಅನುಕೂಲವಾಗಲಿದೆ. ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿಗೆ ಪರ್ಯಾಯವಾಗಿ ಜಮೀನು ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ ಬಜೆಟ್ ವೇಳೆಗೆ ಕೇಂದ್ರ ಸರ್ಕಾರದಿಂದ ಅರಣ್ಯ ಭೂಮಿಗೆ ಅನುಮತಿ ಪಡೆಯುವ ನಿರೀಕ್ಷೆಯಿದೆ ಎಂದರು.

ಮುಂದಿನ ಬಜೆಟ್ ವೇಳೆಗೆ ಕೇಂದ್ರದಿಂದ ಅರಣ್ಯ ಭೂಮಿಗೆ ಸಂಬಂಧಿಸಿದ ಅಗತ್ಯ ಅನುಮತಿ ಪಡೆಯುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಬಿಜೆಪಿ ನಾಯಕರೂ ರಾಜಕೀಯ ಬದಿಗಿಟ್ಟು ಸಹಕಾರ ನೀಡಬೇಕು. ಎಲ್ಲರೂ ಒಟ್ಟಾಗಿ ಹೋಗಿ ಯೋಜನೆಗೆ ಅನುಮತಿ ಪಡೆಯೋಣ ಎಂದು ಮನವಿ ಮಾಡಿದರು.

ಘಟಕಕ್ಕೆ ಬೇಕಾದಷ್ಟು ಜಮೀನು ಕೊಡಲು ಸಿದ್ಧ:

ವಿಮಾನ ಎಂಜಿನ್ ದುರಸ್ತಿ ಘಟಕಕ್ಕೆ ರಾಜ್ಯ ಸರ್ಕಾರ ಜಮೀನು ನೀಡುತ್ತಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿರುವ ಕುರಿತು ಕೇಳಿದಾಗ, ನಾವು ಈಗಾಗಲೇ 100 ಎಕರೆ ಜಮೀನು ನೀಡುವುದಾಗಿ ಹೇಳಿದ್ದೇವೆ. 500 ಎಕರೆ ಬೇಕೆಂದು ಕೇಳಿದ್ದಾರೆ. ಖಂಡಿತವಾಗಿಯೂ ಕೊಡುತ್ತೇವೆ. ಮೊದಲು ಅವರು ಕೆಲಸ ಆರಂಭಿಸಲಿ. ಆ ಬಳಿಕ ಎಷ್ಟು ಜಮೀನು ಬೇಕೋ ಅಷ್ಟನ್ನು ನೀಡುತ್ತೇವೆ ಎಂದರು.

2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರುವುದು ಖಚಿತ. ಮುಂದಿನ ಮೂರರಿಂದ ನಾಲ್ಕು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗಲಿವೆ. ಈ ಚುನಾವಣೆಗಳಿಗೆ ಎಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಹಾಲು ದರ ಏರಿಕೆ ದೀಪಾವಳಿ ಗಿಫ್ಟ್‌ : ವಿಜಯೇಂದ್ರ
ದೀಪಾವಳಿ ಹಬ್ಬಕ್ಕಾಗಿ ಕೆಎಸ್ಸಾರ್ಟಿಸಿ 2600 ಹೆಚ್ಚುವರಿ ಬಸ್‌ ಕಾರ್‍ಯಾ ಚರಣೆ