ಫೆ.27ರಿಂದ ಪಿಯು, ಮಾ.22ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ?

Published : Oct 09, 2026, 10:56 AM IST
Exam

ಸಾರಾಂಶ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 2027ರ ಮಾ. 22ರಿಂದ ಏ. 5 ರವರೆಗೆ, ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು 2027ರ ಫೆ.27ರಿಂದ ಮಾ.17ರವರೆಗೆ ನಡೆಸಲು ಉದ್ದೇಶಿಸಲಾಗಿದೆ.

ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಈ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಬೇಕು. ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಎಸ್ಸೆಸ್ಸೆಲ್ಸಿ ವೇಳಾಪಟ್ಟಿಗೆ ಸಂಬಂಧಿಸಿದ ಆಕ್ಷೇಪಗಳನ್ನು dpikseab@gmail.com ಹಾಗೂ ದ್ವಿತೀಯ ಪಿಯುಸಿ ವೇಳಾಪಟ್ಟಿಗೆ ಸಂಬಂಧಿಸಿದ ಆಕ್ಷೇಪಗಳನ್ನು directorpuekseab@gmail.com ಗೆ ಅಕ್ಟೋಬರ್‌ 22ರೊಳಗೆ ಸಲ್ಲಿಸಲು ಮಂಡಳಿ ಸೂಚಿಸಿದೆ.

ಪರೀಕ್ಷೆ 2:

ಇದರ ಜೊತೆಗೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ -2ರ ತಾತ್ಕಾಲಿಕ ವೇಳಾಪಟ್ಟಿಯನ್ನೂ ಮಂಡಳಿ ಪ್ರಕಟಿಸಿದ್ದು, ಆಕ್ಷೇಪಣೆ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗೆ https://kseab.karnataka.gov.in ಗೆ ಭೇಟಿ ನೀಡಬಹುದು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ

ಮಾ. 22: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ)

ಮಾ. 25: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ

ಮಾ.27: ದ್ವಿತೀಯ ಭಾಷೆ (ಇಂಗ್ಲಿಷ್‌, ಕನ್ನಡ)

ಮಾ.30: ಗಣಿತ, ಸಮಾಜಶಾಸ್ತ್ರ

ಏ. 2: ತೃತೀಯ ಭಾಷೆ(ಹಿಂದಿ, ಹಿಂದಿ(ಎನ್‌ಸಿಇಆರ್‌ಟಿ), ಕನ್ನಡ(ಪುನರಾವರ್ತಿತರಿಗೆ ಮಾತ್ರ), ಉರ್ದು, ತುಳು, ಇಂಗ್ಲಿಷ್, ಸಂಸ್ಕೃತ, ಕೊಂಕಣಿ, ತೆಲುಗು, ತಮಿಳು, ಮರಾಠಿ) ಹಾಗೂ ಎನ್‌ಎಸ್‌ಕ್ಯೂಎಫ್‌ ವಿಷಯಗಳು,

ಏ.3: ಜೆಟಿಎಸ್‌ ವಿಷಯಗಳು

ಏ. 5: ಸಮಾಜ ವಿಜ್ಞಾನ

*ದ್ವಿತೀಯ ಪಿಯು ಪರೀಕ್ಷೆ- 

1 ತಾತ್ಕಾಲಿಕ ವೇಳಾಪಟ್ಟಿ

ಫೆ.27: ಕನ್ನಡ, ಅರೇಬಿಕ್‌

ಮಾ.1: ಇಂಗ್ಲಿಷ್‌

ಮಾ.2: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌

ಮಾ.3: ಭೂಗೋಳಶಾಸ್ತ್ರ, ಮನಃಶಾಸ್ತ್ರ

ಮಾ.4: ಸಮಾಜಶಾಸ್ತ್ರ, ಭೌತಶಾಸ್ತ್ರ

ಮಾ.5: ಲೆಕ್ಕಶಾಸ್ತ್ರ

ಮಾ.8: ರಸಾಯನಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

ಮಾ.9: ಅರ್ಥಶಾಸ್ತ್ರ, ಭೂಗರ್ಭಶಾಸ್ತ್ರ

ಮಾ.11: ಹಿಂದುಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪು ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್ , ಹೆಲ್ತ್‌ಕೇರ್ , ಬ್ಯೂಟಿ ಅಂಡ್ ವೆಲ್‌ನೆಸ್‌

ಮಾ.12: ವ್ಯವಹಾರ ಅಧ್ಯಯನ, ಗಣಿತ

ಮಾ.13: ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಗೃಹವಿಜ್ಞಾನ

ಮಾ.15: ರಾಜ್ಯಶಾಸ್ತ್ರ, ಜೀವಶಾಸ್ತ್ರ, ಗಣಕಶಾಸ್ತ್ರ

ಮಾ.16: ಇತಿಹಾಸ, ಸಂಖ್ಯಾಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ

ಮಾ.17: ಹಿಂದಿ

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಮಾಸಾಂತ್ಯಕ್ಕ 110 ಔಷಧಗಳ ಬೆಲೆ ಇಳಿಕೆ
ಹು- ಧಾ ನಡುವೆ ಭಾರತದ ಮೊದಲ ಆಧುನಿಕ ಟ್ರ್ಯಾಮ್‌?