ಇಂದು ಮಧ್ಯಾಹ್ನ 3ಕ್ಕೆ ಪಿಯುಸಿ ಫಲಿತಾಂಶ

Published : Apr 09, 2026, 10:17 AM IST
PUC

ಸಾರಾಂಶ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌, ಮೊಬೈಲ್‌ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

  ಬೆಂಗಳೂರು :  ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌, ಮೊಬೈಲ್‌ ಆ್ಯಪ್‌ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

https://karresults.nic.in ವೆಬ್‌ಸೈಟ್

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಮತ್ತು ‘ಕರ್ನಾಟಕ ಒನ್‌’ ಮೊಬೈಲ್‌ ಆ್ಯಪ್‌ ಮೂಲಕವೂ ಪಡೆಯಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ವಾಟ್ಸಪ್‌/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.

ಡಿಜಿಲಾಕರ್‌ನಲ್ಲಿ ಇಂದೇ ಅಂಕಪಟ್ಟಿ

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆಯ ಸಮಯದಲ್ಲೇ ಅವರ ಅಂಕಪಟ್ಟಿಗಳನ್ನೂ ಡಿಜಿಲಾಕರ್‌ನಲ್ಲಿ ಅಪ್‌ಲೋಡ್‌ ಮಾಡಲಾಗುತ್ತದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಮಂಡಳಿ ಮಾಹಿತಿ ನೀಡಿದೆ. 

ಅಂಕಪಟ್ಟಿಯನ್ನು ಡಿಜಿಲಾಕರ್‌ ಮೂಲಕ ಯಾವ ರೀತಿ ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎನ್ನುವ ಮಾಹಿತಿಯನ್ನು https://tinyurl.com/mw84wmh9 ನಲ್ಲಿ ತಿಳಿದುಕೊಳ್ಳಬಹುದು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕಾಡುಪ್ರಾಣಿಗಳ ಸಂತಾನಶಕ್ತಿ ಹರಣಕ್ಕೆ ರಾಜ್ಯ ಸರ್ಕಾರದಿಂದ ಚಿಂತನೆ: ಖಂಡ್ರೆ
ನೀರು ದುರ್ಬಳಕೆ ಮಾಡಿದರೆ ದಂಡ: ರಾಮ್‌ಪ್ರಸಾತ್