ರಾಜ್ಯದಲ್ಲಿ ಇಂದಿನಿಂದ ಜು.1ವರೆಗೆ ಪಲ್ಸ್‌ ಪೋಲಿಯೋ ಕಾರ್ಯಕ್ರಮ

Published : Jun 28, 2026, 04:38 AM IST
Pulse Polio

ಸಾರಾಂಶ

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಅಂಗವಾಗಿ ಜೂ.28ರಿಂದ ಜು.1ರವರೆಗೆ ರಾಜ್ಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಉದ್ದೇಶಿಸಲಾಗಿದೆ.ನಗರ ಕುಟುಂಬ ಕಲ್ಯಾಣ ಕೇಂದ್ರಗಳು, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಪೋಲಿಯೋ ಬೂತ್‌ಗಳನ್ನು ಸ್ಥಾಪಿಸಲಾಗಿದೆ

 ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಅಂಗವಾಗಿ ಜೂ.28ರಿಂದ ಜು.1ರವರೆಗೆ ರಾಜ್ಯಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಉದ್ದೇಶಿಸಲಾಗಿದೆ.  

ಮಕ್ಕಳಿಗೆ ಪೋಲಿಯೋ ಲಸಿಕೆ

ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್‌ಗಳು, ಹೆರಿಗೆ ಆಸ್ಪತ್ರೆಗಳು, ನಗರ ಕುಟುಂಬ ಕಲ್ಯಾಣ ಕೇಂದ್ರಗಳು, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಪೋಲಿಯೋ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ಸ್ವಯಂಸೇವಾ ಸಂಸ್ಥೆಗಳ ಆಸ್ಪತ್ರೆಗಳು, ಮಾಲ್‌ಗಳು, ಖಾಸಗಿ ನರ್ಸಿಂಗ್ ಹೋಮ್‌ಗಳು, ವೈದ್ಯಕೀಯ ಮಹಾವಿದ್ಯಾಲಯಗಳು, ಪ್ರಮುಖ ಉದ್ಯಾನವನಗಳು, ಮೆಟ್ರೋ ನಿಲ್ದಾಣಗಳು ಹಾಗೂ ಕೊಳಚೆ ಪ್ರದೇಶಗಳಂತಹ ಜನನಿಬಿಡ ಸ್ಥಳಗಳಲ್ಲಿ ಸ್ಥಿರ ಹಾಗೂ ಸಂಚಾರಿ ತಂಡಗಳನ್ನು ನಿಯೋಜಿಸಲಾಗಿದೆ.

ನಗರದಲ್ಲಿ 29,30,605 ಮನೆ

ನಗರದಲ್ಲಿ 29,30,605 ಮನೆಗಳಿವೆ. ಒಟ್ಟು ಜನಸಂಖ್ಯೆ 1.23 ಕೋಟಿ ಇದ್ದು, 5 ವರ್ಷದ ಮಕ್ಕಳ ಸಂಖ್ಯೆ 11,47,872 ಇದೆ. ಅದಕ್ಕಾಗಿ 3,444 ಬೂತ್‌ಗಳು, 660 ಸ್ಥಿರ ತಂಡಗಳು, 435 ಸಂಚಾರಿ ತಂಡಗಳನ್ನು ಸಜ್ಜುಗೊಳಿಸಲಾಗಿದೆ. 817 ಮೇಲ್ವಿಚಾರಕರು, 15,964 ಲಸಿಕಾ ಕಾರ್ಯಕರ್ತರು ಅಭಿಯಾನದಲ್ಲಿ ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ನಾಡಪ್ರಭುವಿಗೆ ನಮಿಸಿದ ಮುಖ್ಯಮಂತ್ರಿ ಡಿಕೆಶಿ
ಕರುನಾಡು ಕಂಡ ಅಪ್ರತಿಮ ನಾಯಕ ಕೆಂಪೇಗೌಡ