ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಮಳೆ ಹಾಗೂ ಚದುರಿದಂತೆ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು : ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಮಳೆ ಹಾಗೂ ಚದುರಿದಂತೆ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಏ.18, 19 ಮತ್ತು 20ರಂದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮೈಸೂರು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ಮತ್ತು ಚದುರಿದಂತೆ ಹಗುರ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಯಾದಗಿರಿ, ಬೀದರ್, ಕಲಬುರಗಿ, ಗದಗ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯಾಗಲಿದೆ. ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.