ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗುವ ಮುನ್ಸೂಚನೆ

ಸಾರಾಂಶ

ರಾಜ್ಯದಲ್ಲಿ ಕೆಲ ದಿನ ವಿರಾಮ ನೀಡಿದ ಮಳೆ ಮತ್ತೆ ಭಾನುವಾರದಿಂದ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನ ವಿರಾಮ ನೀಡಿದ ಮಳೆ ಮತ್ತೆ ಭಾನುವಾರದಿಂದ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. 

ಕಳೆದ ನಾಲ್ಕೈದು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಮತ್ತೆ ಮಳೆ ಆರಂಭದ ಲಕ್ಷಣ ಇದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಏ.27 ರಿಂದ 30ರವರೆಗೆ ಹೆಚ್ಚಿನ ಮಳೆ ಸಾಧ್ಯತೆ ಇದೆ. 

ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಏ.27ಕ್ಕೆ ಮಾತ್ರ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ನಂತರ ಸಾಧಾರಣ ಮಳೆಯಾಗಲಿದೆ. ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಯಲ್ಲಿ ಆಲಿಕಲ್ಲು ಮಳೆಯಾಗುವ ನಿರೀಕ್ಷೆ ಇದೆ. ಜತೆಗೆ, 50 ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ.27ರಿಂದ ಐದಾರು ದಿನ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ, ದಕ್ಷಿಣ ಕನ್ನಡ, ಹಾವೇರಿ ಹಾಗೂ ಬೆಳಗಾವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೀದರ್‌ ನಲ್ಲಿ ಅತಿ ಹೆಚ್ಚು 42 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಆಲಿಕಲ್ಲು ಮಳೆ:

- ಕೆಲ ದಿನಗಳ ವಿರಾಮದ ಬಳಿಕ ಮಳೆ

- 5 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ನಿರೀಕ್ಷೆ

Share this article