ರಾಜ್ಯದಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಮತ್ತಷ್ಟು ಇಳಿಕೆ ಸಂಭವ : ಹವಾಮಾನ ಇಲಾಖೆ ಮುನ್ಸೂಚನೆ

Published : Jul 29, 2024, 07:49 AM IST
Karnataka Rain

ಸಾರಾಂಶ

  ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಮಳೆ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಮಳೆ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖವಾಗಿ ಕರಾವಳಿ ಮತ್ತು ಮಳೆನಾಡು ಭಾಗದಲ್ಲಿ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ಕ್ಷೀಣಿಸಿದೆ. ಮಂಗಳವಾರದಿಂದ ಮತ್ತಷ್ಟು ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜು.29ಕ್ಕೆ ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮಾತ್ರ ಯಲ್ಲೊ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ ಕ್ಯಾಸಲ್‌ ರಾಕ್‌ ನಲ್ಲಿ ಅತಿ ಹೆಚ್ಚು 7 ಸೆಂ.ಮೀ ಮಳೆಯಾಗಿದೆ.

ಉಳಿದಂತೆ ಜಗಲಬಟ್‌ ಹಾಗೂ ಲೋಂಡಾ ತಲಾ 6, ಕದ್ರಾ 5, ಯಲ್ಲಾಪುರ, ಸಿದ್ದಾಪುರ, ಬೆಳಗಾವಿ, ಕಮ್ಮರಡಿಯಲ್ಲಿ ತಲಾ 3, ಮಂಕಿ, ಗೇರಸೊಪ್ಪ, ಕಾರವಾರ, ಬನವಾಸಿನಲ್ಲಿ ತಲಾ 2, ಧರ್ಮಸ್ಥಳ, ಬೆಳ್ತಂಗಡಿ, ಹಳಿಯಾಳ, ಉಪ್ಪಿನಂಗಡಿ, ಔರಾದ್‌ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

PREV

Recommended Stories

ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ
ರೈತ ಕುಟುಂಬಗಳ ಆರ್ಥಿಕ ಸುಧಾರಣೆಗೆ ಕ್ರಮ: ಶರತ್‌