ಜೈಲಿನಲ್ಲಿ ‘ಎ’ ದರ್ಜೆ ಸೌಲಭ್ಯ ಕೋರಿದ್ದ ರೆಡ್ಡಿ ಅರ್ಜಿ ತಿರಸ್ಕೃತ

Published : May 16, 2025, 10:14 AM IST
Gali Janardhan Reddy

ಸಾರಾಂಶ

ಓಬಳಾಪುರಂ ಮೈನಿಂಗ್ ಕಂಪನಿಯ (ಒಎಂಸಿ) ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.

 ಹೈದರಾಬಾದ್: ಓಬಳಾಪುರಂ ಮೈನಿಂಗ್ ಕಂಪನಿಯ (ಒಎಂಸಿ) ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ. 

ಪ್ರಸ್ತುತ ತೆಲಂಗಾಣದ ಚಂಚಲಗುಡ ಜೈಲಿನಲ್ಲಿರುವ ರೆಡ್ಡಿ, ತಾವು ಮಾಜಿ ಸಚಿವರು ಮತ್ತು ತೆರಿಗೆ ಪಾವತಿದಾರರಾಗಿರುವುದರಿಂದ ಜೈಲರ್‌ಗಳ ಕಾಯ್ದೆಯಡಿಯಲ್ಲಿ ಜೈಲಿನಲ್ಲಿ ‘ಎ’ ದರ್ಜೆಯ ಸೌಲಭ್ಯಗಳನ್ನು ನೀಡುವಂತೆ ಕೋರಿದ್ದರು. 

ಆದರೆ ಕೋರ್ಟ್ ಅವರ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದ್ದು, ಹೈಕೋರ್ಟ್‌ಗೆ ತೆರಳಲು ಸೂಚಿಸಿದೆ ಎಂದು ಕಾನೂನು ಮೂಲಗಳು ತಿಳಿಸಿವೆ.ಎ ದರ್ಜೆಯಲ್ಲಿ ಪ್ರತ್ಯೇಕ ಕೋಣೆ, ಹಾಸಿಗೆ, ದಿಂಬು, ದಿನಪತ್ರಿಕೆ, ರೇಡಿಯೋ, ಪ್ರತ್ಯೇಕ ಊಟದ ಸ್ಥಳ, ಮನರಂಜನಾ ಸೌಕರ್ಯಗಳು ಲಭ್ಯವಿರುತ್ತದೆ. ಸುಮಾರು 14 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಮೇ 6ರಂದು ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವು ಜನಾರ್ದನ ರೆಡ್ಡಿ ಮತ್ತು ಇತರ ಮೂವರನ್ನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ದೋಷಿಗಳೆಂದು ತೀರ್ಪು ನೀಡಿತ್ತು.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ