ರೇಣುಕಾಸ್ವಾಮಿ ಹತ್ಯೆ: ಪೆನ್‌ಡ್ರೈವ್‌ ಸಾಕ್ಷ್ಯಕ್ಕೆ ಸಿವಿಲ್‌ ಕೋರ್ಟ್‌ ಒಪ್ಪಿಗೆ

Published : Jun 18, 2026, 06:35 AM IST
Renukaswamy Darshan

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ‌‌‌‌‌ ಕೊಲೆ‌‌ ಪ್ರಕರಣಕ್ಕೆ ಸಂಬಂಧಿಸಿ ಪ್ರಾಷಿಕ್ಯೂಷನ್ (ತನಿಖಾಧಿಕಾರಿಗಳು) ಸಲ್ಲಿಸಿರುವ ಸಿಸಿಟಿವಿ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈ ಅನ್ನು ಸಾಕ್ಷ್ಯವಾಗಿ ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಬುಧವಾರ ಪರಿಗಣಿಸಿದೆ.

  ಬೆಂಗಳೂರು :  ಚಿತ್ರದುರ್ಗದ ರೇಣುಕಾಸ್ವಾಮಿ‌‌‌‌‌ ಕೊಲೆ‌‌ ಪ್ರಕರಣಕ್ಕೆ ಸಂಬಂಧಿಸಿ ಪ್ರಾಷಿಕ್ಯೂಷನ್ (ತನಿಖಾಧಿಕಾರಿಗಳು) ಸಲ್ಲಿಸಿರುವ ಸಿಸಿಟಿವಿ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈ ಅನ್ನು ಸಾಕ್ಷ್ಯವಾಗಿ ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಬುಧವಾರ ಪರಿಗಣಿಸಿದೆ.

 ದೃಢೀಕರಿಸಿದ ಪ್ರಮಾಣ ಪತ್ರ ಸಲ್ಲಿಸಿದ ಮಹಿಳಾ ನಿವಾಸಿ

ರೇಣುಕಾಸ್ವಾಮಿ‌‌‌‌‌ ಕೊಲೆ‌‌ ಪ್ರಕರಣವನ್ನು 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಬುಧವಾರ ಮುಂದುವರಿಸಿತು.‌

ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ‌‌ ಪಿ.ಪ್ರಸನ್ನ ಕುಮಾರ್ ಅವರು, ಪೆನ್‌ಡ್ರೈವ್‌ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಅದನ್ನು ನೀಡಿದ ಸುಮನಹಳ್ಳಿಯ ಬಳಿಯ ಅಪಾರ್ಟ್‌ಮೆಂಟ್‌ವೊಂದರ ಮಹಿಳಾ ನಿವಾಸಿ ದೃಢೀಕರಿಸಿದ ಪ್ರಮಾಣ ಪತ್ರ ಸಲ್ಲಿಸಿದರು.

ಪ್ರಕರಣದ ವಿಚಾರಣೆಯನ್ನು ಜೂ.22ಕ್ಕೆ

ಇದರಿಂದ‌ ಪೆನ್‌ಡ್ರೈವ್‌ ಅನ್ನು ಸಾಕ್ಷ್ಯಾಧಾರವಾಗಿ ನ್ಯಾಯಾಲಯ ಪರಿಗಣಿಸಿ, ಪ್ರಕರಣದ ವಿಚಾರಣೆಯನ್ನು ಜೂ.22ಕ್ಕೆ ಮುಂದೂಡಿತು.

ಮಂಗಳವಾರ ನಡೆದಿದ್ದ ವಿಚಾರಣೆ ವೇಳೆ ತನಿಖಾಧಿಕಾರಿಗಳು ಸಲ್ಲಿಸಿರುವ‌ ಸಿಸಿಟಿವಿ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ (ಡಿಜಿಟಲ್‌‌ ಸಾಕ್ಷ್ಯ) ಅನ್ನು ಮುಚ್ಚಿದ ಲಕೋಟೆಯಿಂದ ಹೊರಗೆ ತೆಗೆದಿದ್ದ ನ್ಯಾಯಾಲಯವು ಪೆನ್ ಡ್ರೈವ್ ಅನ್ನು ಪ್ಲೇ ಮಾಡಲು ( ವೀಕ್ಷಿಸಲು) ಬಯಸಿತ್ತು.

ಆಗ ದರ್ಶನ್ ಹಾಗೂ ಇತರೆ ಆರೋಪಿಗಳು‌ ಆಕ್ಷೇಪಿಸಿ, ಪೆನ್ ಡ್ರೈವ್ ಡಿಜಿಟಲ್ ಸಾಕ್ಷ್ಯವಾಗಿದೆ. ಅದನ್ನು‌ ಪರಿಗಣಿಸಬೇಕಾದರೆ ಸಾಕ್ಷ್ಯ ಕಾಯ್ದೆ ಸೆಕ್ಷನ್ 65 ಬಿ ಅನುಸಾರ ಡಿಜಿಟಲ್ ಸಾಕ್ಷ್ಯ ನೀಡಿದವರಿಂದ ದೃಢೀಕೃತ ಪ್ರಮಾಣ ಪತ್ರವನ್ನು ಸಲ್ಲಿಸುವುದು ಕಡ್ಡಾಯ. ಆದರೆ, ತನಿಖಾಧಿಕಾರಿಗಳು ಆ ‌ಪ್ರಮಾಣ ಪತ್ರವನ್ನು ಸಲ್ಲಿಸದ‌ ಕಾರಣ ಪೆನ್ ಡ್ರೈವ್ ಅನ್ನು ಸಾಕ್ಷ್ಯಧಾರವಾಗಿ ಗುರುತಿಸುವಂತಿಲ್ಲ ಎಂದು ಕೋರಿದ್ದರು.

ಇದರಿಂದ‌ ಪೆನ್ ಡ್ರೈವ್ ಅನ್ನು ಸಾಕ್ಷ್ಯಾಧಾರವಾಗಿ ಗುರತಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಬುಧವಾರ ಆದೇಶ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿತ್ತು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಜೆಡಿಎಸ್‌, ಬಿಜೆಪಿ ಅಧಿಕಾರದಲ್ಲಿದ್ದಾಗ ಬಿಡದಿ ಟೌನ್‌ಶಿಪ್‌ ಏಕೆ ರದ್ದು ಮಾಡ್ಲಿಲ್ಲ?: ಬಾಲಕೃಷ್ಣ
ಗ್ಯಾರಂಟಿ ಆಯ್ತು, ಈಗ 16 ಲಕ್ಷ ಜನರ ಸಾಮಾಜಿಕ ಪಿಂಚಣಿ ಕಟ್‌