ರಾಜ್ಯದಲ್ಲಿ ಶೀಘ್ರ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ವಸತಿ ಶಾಲೆ: ಮಧು

Published : Jun 15, 2025, 08:35 AM IST
Madhu Bangarappa Karnataka

ಸಾರಾಂಶ

ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯದ ಜೊತೆಗೆ ಉತ್ತಮ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಕ್ಯಾನ್ಸರ್ ಪೀಡಿತ ಮಕ್ಕಳ ವಸತಿ ಶಾಲೆಯನ್ನು ತೆರೆಯಲು ಯೋಜನೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

  ಶಿವಮೊಗ್ಗ : ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯದ ಜೊತೆಗೆ ಉತ್ತಮ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಕ್ಯಾನ್ಸರ್ ಪೀಡಿತ ಮಕ್ಕಳ ವಸತಿ ಶಾಲೆಯನ್ನು ತೆರೆಯಲು ಯೋಜನೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಯಾನ್ಸರ್ ಪೀಡಿತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗುತ್ತಿದೆ. ಪ್ರಥಮ ಹಂತದಲ್ಲಿ ರಾಜ್ಯದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಒಂದಾದ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಪಕ್ಕದಲ್ಲೇ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ವಸತಿ ಶಾಲೆಯನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕ್ಯಾನ್ಸರ್‌ ಕಾಯಿಲೆಯಿಂದ ಬಾಧಿತರಾಗಿರುವ ಸುಮಾರು 3,500 ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್‌ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ. ಜೊತೆಗೆ, ಕ್ಯಾನ್ಸರ್‌ ಭಾದಿತ ಮಕ್ಕಳ ಲಾಲನೆ, ಪಾಲನೆ ದೃಷ್ಟಿಯಿಂದ ಅವರ ಪೋಷಕರಿಗೂ ವಸತಿ ಸೌಲಭ್ಯ ಕಲ್ಪಿಸಲು ಗಮನ ಹರಿಸಲಾಗಿದೆ. ಆರಂಭಿಸಲು ಉದ್ದೇಶಿಸಲಾಗಿರುವ ಕ್ಯಾನ್ಸರ್‌ ಭಾದಿತ ಮಕ್ಕಳ ವಸತಿ ಶಾಲೆಗೆ ಆರಂಭಿಕ ಹಂತದಲ್ಲಿ ಸುಮಾರು 1,500 ಮಕ್ಕಳು ದಾಖಲಾಗಬಹುದಾದ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ ಎಂದರು.

PREV
Read more Articles on

Recommended Stories

ಕೂಡಲೇ ಹಳದಿ ಮಾರ್ಗ ಮೆಟ್ರೋ ಉದ್ಘಾಟನೆ ಮಾಡಿ : ತೇಜಸ್ವಿ ಆಗ್ರಹ
ಐದು ಸಾವಿರ ಕೋಟಿ ರು. ವೆಚ್ಚದ 5ನೇ ಹಂತದ ಕಾವೇರಿ ಯೋಜನೆಗೆ ಕೇವಲ 70 ಸಾವಿರ ಸಂಪರ್ಕ!