ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.

Published : Mar 16, 2026, 01:39 PM IST
money

ಸಾರಾಂಶ

ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ, ನಿಧನ ಹೊಂದಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಗಳಿಕೆ ರಜೆ ನಗದೀಕರಣ ಸೌಲಭ್ಯಕ್ಕಾಗಿ ಸರ್ಕಾರ 30 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ, ನಿಧನ ಹೊಂದಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಗಳಿಕೆ ರಜೆ ನಗದೀಕರಣ ಸೌಲಭ್ಯಕ್ಕಾಗಿ ಸರ್ಕಾರ 30 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. 

ಜಿಲ್ಲಾವಾರು ಮರು ಹಂಚಿಕೆ

ಬಿಡುಗಡೆ ಮಾಡಿರುವ ಅನುದಾನವನ್ನು ಜಿಲ್ಲಾವಾರು ಮರು ಹಂಚಿಕೆ ಕೂಡ ಮಾಡಲಾಗಿದ್ದು, 2022-23ರಿಂದ 2025-26ನೇ ಸಾಲಿನಲ್ಲಿ ನಿವೃತ್ತಿ, ನಿಧನ ಹೊಂದಿರುವ ಸಿಬ್ಬಂದಿ ಗಳಿಕೆ ರಜೆ ನಗದೀಕರಿಸಿ ಅವರಿಗೆ ಸೂಕ್ತ ಮೊತ್ತವನ್ನು ಸಿಬ್ಬಂದಿ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ(ಪದವಿ ಪೂರ್ವ) ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. 2025-26ನೇ ಸಾಲಿಗೆ ಮೊದಲ ಆದ್ಯತೆ ನೀಡಿ ನಂತರ 2022-23 ಮತ್ತು 2023-24ನೇ ಸಾಲಿನವರ ಗಳಿಕೆ ರಜೆ ನಗದೀಕರಣದ ಮೊತ್ತ ಜಮೆ ಮಾಡಬೇಕೆಂದು ಸೂಚಿಸಿದೆ.

ಪದಾಧಿಕಾರಿಗಳ ಧನ್ಯವಾದ

ನಿವೃತ್ತರ ಗಳಿಕೆ ರಜೆ ನಗದೀಕರಣಕ್ಕೆ ಆದೇಶಿಸಿ ಅನುದಾನ ಬಿಡುಗಡೆ ಮಾಡಿದ ಸರ್ಕಾರಕ್ಕೆ ಅನುದಾನಿತ ಶಾಲಾ, ಕಾಲೇಜುಗಳ ಬೋಧಕೇತರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ಮತ್ತು ಇತರೆ ಪದಾಧಿಕಾರಿಗಳು ಧನ್ಯವಾದ ತಿಳಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಎಲ್‌ಪಿಜಿ ಪೂರೈಕೆ ಸುಧಾರಣೆ: ಸಪ್ಲೈ ಶೇ.20ರಷ್ಟು ಏರಿಕೆ
ಬಾಡೂಟಕ್ಕೂ ತಟ್ಟಿದ ಗ್ಯಾಸ್‌ ಬಿಸಿ : ಟನ್‌ ಸೌಧೆಗೆ ₹5000