‘ಶಕ್ತಿ’ಯಿಂದ ಮಹಿಳೆಯರ ಸಾರಿಗೆಯ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ

Published : Nov 07, 2025, 07:08 AM IST
KSRTC Bus

ಸಾರಾಂಶ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಶಕ್ತಿ’ ಯೋಜನೆ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ತನ್ನ ಅಧ್ಯಯನ ವರದಿಯಲ್ಲಿ ತಿಳಿಸಿದೆ.

  ಬೆಂಗಳೂರು :  ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಶಕ್ತಿ’ ಯೋಜನೆ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ತನ್ನ ಅಧ್ಯಯನ ವರದಿಯಲ್ಲಿ ತಿಳಿಸಿದೆ.

ನಾಲ್ಕು ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣ

ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಯೋಜನೆಯಿಂದ ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

2023ರ ಜೂನ್‌ 11ರಂದು ಆರಂಭಿಸಲಾದ ಶಕ್ತಿ ಯೋಜನೆ

2023ರ ಜೂನ್‌ 11ರಂದು ಆರಂಭಿಸಲಾದ ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ಪುರುಷರಿಗಿಂತ ಮಹಿಳಾ ಪ್ರಯಾಣಿಕರು ಹೆಚ್ಚುವಂತಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಮಹಿಳೆಯರು ಅದರ ಪ್ರಯೋಜನವನ್ನು ಉತ್ತಮವಾಗಿ ಪಡೆಯುತ್ತಿದ್ದಾರೆ. 2023ರ ಜನವರಿಯಿಂದ 2025ರ ಜನವರಿವರೆಗೆ ಬಿಎಂಟಿಸಿ 2.89 ಕೋಟಿ ಟ್ರಿಪ್‌ಗಳಲ್ಲಿ ಬಸ್‌ ಸೇವೆ ನೀಡಿದೆ. ಈ ಅವಧಿಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ 2.5 ಪಟ್ಟು ಹೆಚ್ಚಾಗಿದೆ. ಮಹಿಳೆ ಮತ್ತು ಪುರುಷ ಪ್ರಯಾಣಿಕರ ಅನುಪಾತ 60:40 ದಾಖಲಾಗಿದೆ.

ಮಹಿಳಾ ಪ್ರಯಾಣಿಕರು ಹೆಚ್ಚಾದರೂ ಬಿಎಂಟಿಸಿ ಆದಾಯದಲ್ಲಿ ಕುಸಿತವಾಗಿಲ್ಲ. ಅಧ್ಯಯನ ವರದಿ ಪ್ರಕಾರ ಬಿಎಂಟಿಸಿಯ ಆದಾಯವು ಹಿಂದಿಗಿಂತಲೂ ಹೆಚ್ಚಾಗಿದೆ. ಕೇವಲ ನಗರದ ಕೇಂದ್ರಭಾಗವಷ್ಟೇ ಅಲ್ಲದೆ ಬೆಂಗಳೂರಿನ ಉತ್ತರ, ಪಶ್ಚಿಮ ಭಾಗದಲ್ಲಿಯೂ ಪ್ರಯಾಣಿಕರು ಹೆಚ್ಚಾಗಿದೆ. ಮೆಟ್ರೋ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಬಿಎಂಟಿಸಿಯ ಮೆಟ್ರೋ ಫೀಡರ್‌ ಬಸ್‌ಗಳ ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

PREV
Read more Articles on

Recommended Stories

ಕಸದಿಂದ ಲಕ್ಷ ಮನೆಗೆ ವಿದ್ಯುತ್ ಪೂರೈಕೆ: ಕರಿಗೌಡ
ಭಾರತದ ಅಗರಬತ್ತಿಗಿನ್ನು ಬಿಐಎಸ್‌ ಪ್ರಮಾಣ : ಶೋಭಾ ಕರಂದ್ಲಾಜೆ