ಕ್ಯಾನ್ಸರ್‌ ಗೆದ್ದ ನಟ ಶಿವರಾಜ್‌ಕುಮಾರ್‌ ತಾಯ್ನಾಡಿಗೆ - ಅಮೆರಿಕದಿಂದ ಬೆಂಗಳೂರಿಗೆ ಆಗಮನ

ಸಾರಾಂಶ

ನಟ ಶಿವರಾಜ್‌ಕುಮಾರ್‌ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿಕೊಂಡು ಭಾನುವಾರ ಬೆಂಗಳೂರಿಗೆ ವಾಪಸಾಗಿದ್ದಾರೆ.

 ಬೆಂಗಳೂರು : ನಟ ಶಿವರಾಜ್‌ಕುಮಾರ್‌ ಅಮೆರಿಕದಲ್ಲಿ ಯಶಸ್ವಿಯಾಗಿ ಕ್ಯಾನ್ಸರ್ ಚಿಕಿತ್ಸೆ ಮುಗಿಸಿಕೊಂಡು ಭಾನುವಾರ ಬೆಂಗಳೂರಿಗೆ ವಾಪಸಾಗಿದ್ದಾರೆ.

ಈ ಕುರಿತು ವಿಡಿಯೋ ಮೂಲಕ ಸಂದೇಶ ಹಂಚಿಕೊಂಡಿರುವ ಶಿವರಾಜ್‌ಕುಮಾರ್‌, ‘ನಿಮ್ಮ ಪ್ರೀತಿ ಮತ್ತು ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮನ್ನೆಲ್ಲಾ ನೋಡಲು ನಾನು ಜನವರಿ 26ರಂದು ಗಣರಾಜ್ಯೋತ್ಸವ ದಿನ ಬೆಂಗಳೂರಿಗೆ ಬರುತ್ತಿದ್ದೇನೆ. ನಿಮ್ಮ ಆಶೀರ್ವಾದ ಹೀಗೇ ಇರಲಿ’ ಎಂದು ಹೇಳಿದ್ದಾರೆ.

ಡಿ.18ರಂದು ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್‌ ಅವರಿಗೆ ಚಿಕಿತ್ಸೆ ಯಶಸ್ವಿಯಾಗಿದೆ. ಚಿಕಿತ್ಸೆಯ ನಂತರವೂ ಕೆಲ ದಿನಗಳ ಕಾಲ ಅಮೆರಿಕಾದಲ್ಲೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಶಿವಣ್ಣ ಹೆಚ್ಚು ಕಮ್ಮಿ ಒಂದು ತಿಂಗಳ ನಂತರ ಬೆಂಗಳೂರಿಗೆ ಮರಳಿದ್ದಾರೆ.

Share this article