ಹೈಕೋರ್ಟ್‌ನ 6 ನೂತನ ಜಡ್ಜ್‌ ಪ್ರಮಾಣ ವಚನ

Published : Aug 10, 2026, 10:37 AM IST
Karnataka High court

ಸಾರಾಂಶ

ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು : ಹೈಕೋರ್ಟ್‌ಗೆ ಹೊಸದಾಗಿ ನೇಮಕಗೊಂಡಿರುವ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭ

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ನೂತನ ನ್ಯಾಯಮೂರ್ತಿಗಳಾದ ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ಥಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ್‌ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿಭೂಷಣ ಅವರಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಪ್ರಮಾಣ ವಚನ ಬೋಧಿಸಿದರು.ಈ ಸಂದಭದಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಉಪಸ್ಥಿತರಿದ್ದರು.

ಕರ್ನಾಟಕ ಹೈಕೋರ್ಟ್‌ ಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆ

ಕರ್ನಾಟಕ ಹೈಕೋರ್ಟ್‌ ಗೆ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳು ಮಂಜೂರಾಗಿವೆ. ಸದ್ಯ ಮುಖ್ಯ ನ್ಯಾಯಮೂರ್ತಿ ಸೇರಿ ಒಟ್ಟು 48 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಆರು ಹೊಸ ನ್ಯಾಯಮೂರ್ತಿಗಳ ನೇಮಕ ಆಗಿರುವುದರಿಂದ ಹೈಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿದೆ. ಅವರಲ್ಲಿ 11 ಮಂದಿ ಮಹಿಳಾ ನ್ಯಾಯಮೂರ್ತಿಗಳಿದ್ದಾರೆ. ಇನ್ನೂ 8 ನ್ಯಾಯಮೂರ್ತಿಗಳ ಸ್ಥಾನಗಳು ಖಾಲಿಯಿವೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಹೊಟೇಲ್‌ನಲ್ಲಿ 1 ವರ್ಷ ಹಳೇ ಮೀನು,ಕೊಳೆತ ಚಿಕನ್, ದನದ ಮಾಂಸ ಪತ್ತೆ
ಬ್ಯಾಂಕ್‌ನಿಂದಲೇ ನಕಲಿ ಚಿನ್ನ ಅಡಮಾನ!