ಬ್ಯಾಟರಾಯನಪುರ ಕ್ಷೇತ್ರದ ಕೆಲ ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆ

Published : Jun 16, 2025, 08:30 AM IST
BJP Flag pic

ಸಾರಾಂಶ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

 ಬೆಂಗಳೂರು :  ಪ್ರಧಾನಿ ಮೋದಿ, ಕೇಂದ್ರ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳನ್ನು ಮೆಚ್ಚಿ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬೆಟ್ಟಹಲಸೂರು ಗ್ರಾಮ ಪಂಚಾಯಿತಿ ಸದಸ್ಯರಾದ ತರಹುಣಸೆ ಗ್ರಾಮದ ರಾಜಣ್ಣ ಹಾಗೂ ಸುಗ್ಗಟ್ಟು ಗ್ರಾಮದ ಕಾಂಗ್ರೆಸ್ ಮುಖಂಡ ವೀರಣ್ಣ, ಗಜೇಂದ್ರ, ಸುನೀಲ ಯಾದವ್ ಹಾಗೂ ಹಲವಾರು ಕಾರ್ಯಕರ್ತರು ಕಾಂಗ್ರೆಸ್ ತೊರೆದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಎಚ್.ಸಿ. ತಮ್ಮೇಶಗೌಡ ಹಾಗೂ ಬ್ಯಾಟರಾಯನಪುರ ಮಂಡಲ ಅಧ್ಯಕ್ಷ ಹನುಮಂತ ಗೌಡ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪ್ರಧಾನ ಕಾರ್ಯದರ್ಶಿ ಮಹೇಶ, ಪ್ರತಾಪ, ನವೀನ, ಅನಿಲ ಜಿಲ್ಲಾ ಕಾರ್ಯದರ್ಶಿ ಶ್ರೀಕಂಠ ಮೂರ್ತಿ ಮೋರ್ಚಾದ ಎಲ್ಲ ಅಧ್ಯಕ್ಷರು ಪಾದಾಧಿಕಾರಿಗಳು ಇದ್ದರು. 

PREV
Read more Articles on

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ