ಬೆಂಗಳೂರು : ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು– ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಕೆಎಸ್‌ಆರ್ ಬೆಂಗಳೂರು- ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ (06255) ಅ.18, 21 ಮತ್ತು 25ರಂದು ಬೆಳಗ್ಗೆ 8.05 ಗಂಟೆಗೆ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 2.45 ಗಂಟೆಗೆ ಚೆನ್ನೈ ತಲುಪಲಿದೆ.
ಎಂಜಿಆರ್ ಚೆನ್ನೈ ಸೆಂಟ್ರಲ್ – ಕೆಎಸ್‌ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (06256) ಅ. 18, 21 ಮತ್ತು 25 ರಂದು ಸಂಜೆ 4.30 ಗಂಟೆಗೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಟು, ಅದೇ ದಿನ ರಾತ್ರಿ 10.45 ಗಂಟೆಗೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ.
ಈ ರೈಲು ಮಾರ್ಗದಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್‌ಪೇಟೆ ಕಾಟ್ಪಾಡಿ, ಅರಕ್ಕೋಣಂ ತಿರುವಳ್ಳೂರ್ ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲ್ಲಲಿದೆ. 11 ಸಾಮಾನ್ಯ ದ್ವಿತೀಯ ದರ್ಜೆಯ ಕೋಚ್, 1 ಎಸಿ ಚೇರ್ ಕಾರ್, 1 ಎಸಿ 3-ಟೈರ್ ಕೋಚ್, 4 ಸೆಕೆಂಡ್ ಕ್ಲಾಸ್ ಸಿಟ್ಟಿಂಗ್ ಕೋಚ್ ಹಾಗೂ 2 ಎಸ್‌ಎಲ್‌ಆರ್‌ಡಿ ಕೋಚ್ ಹೊಂದಿರಲಿದೆ ಎಂದು ಪ್ರಕಟಣೆ ತಿಳಿಸಿದೆ.