ಕುಂಭ ಮೇಳಕ್ಕೆ ಮೈಸೂರಿನಿಂದ ಪ್ರಯಾಗ್‌ ರಾಜ್‌ಗೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲು

Published : Dec 22, 2024, 09:16 AM IST
Kumbamela

ಸಾರಾಂಶ

ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲು (06215) ಓಡಿಸಲಿದೆ.

ಹುಬ್ಬಳ್ಳಿ:  ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರಿನಿಂದ ಪ್ರಯಾಗ್‌ರಾಜ್‌ಗೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲು (06215) ಓಡಿಸಲಿದೆ. 

ರೈಲು ಸಂಖ್ಯೆ 06215 ಮೈಸೂರು- ಪ್ರಯಾಗ್ ರಾಜ್ ಒನ್-ವೇ ಕುಂಭ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲು ಡಿ. 23ರಂದು ಮಧ್ಯರಾತ್ರಿ 12.30 ಗಂಟೆಗೆ ಮೈಸೂರಿನಿಂದ ಹೊರಟು, ಡಿ. 25ರಂದು ಬೆಳಗ್ಗೆ 3 ಗಂಟೆಗೆ ಪ್ರಯಾಗ್ ರಾಜ್ ಜಂಕ್ಷನ್ ತಲುಪಲಿದೆ. 

ಮಾರ್ಗ ಮಧ್ಯದಲ್ಲಿ ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸಿಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್. ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹ್ಮದ್‌ ನಗರ, ಮನ್ಮಡ, ಭುಸಾವಲ್, ಖಾಂಡ್ವಾ, ತಲ್ವಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬನಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

 ಈ ರೈಲಿನ ಆಗಮನ ಮತ್ತು ನಿರ್ಗಮನದ ಸಮಯವನ್ನು ತಿಳಿಯಲು, ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್‌ಸೈಟ್‌ (www.enquiry.indianrail.gov.in) ಭೇಟಿ ನೀಡಿ, 139 ಸಂಖ್ಯೆಗೆ ಡಯಲ್ ಮಾಡಿ ಅಥವಾ NTES ಅಪ್ಲಿಕೇಶನ್ ಅನ್ನು ಡೌನ್‌ಲೋಡ್‌ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈಋತ್ಯ ರೈಲ್ವೆಯ ಪ್ರಕಟಣೆ ತಿಳಿಸಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ರಾಜ್ಯದಲ್ಲಿ 6675 ಏಕೋಪಾಧ್ಯಾಯ ಶಾಲೆ!
ಇನ್ನೆರಡು ವರ್ಷದಲ್ಲಿ 175 ಕಿ.ಮೀ ಮೆಟ್ರೋ ಸೇವೆ ಜನರಿಗೆ ಲಭ್ಯ : ಡಿ.ಕೆ.ಶಿವಕುಮಾರ್