ರವಿಶಂಕರ ಗುರೂಜಿ ವಿರುದ್ಧ ಒತ್ತುವರಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

Published : Mar 26, 2026, 10:41 AM IST
Gurudev ravishankar guruji

ಸಾರಾಂಶ

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಸಂಬಂಧ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

 ಬೆಂಗಳೂರು :  ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಸಂಬಂಧ ಆರ್ಟ್ ಆಫ್ ಲಿವಿಂಗ್‌ನ ರವಿಶಂಕರ್ ಗುರೂಜಿ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್   ದಾಖಲಿಸಿರುವ ಎಫ್‌ಐಆರ್

ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್ (ಬಿಎಂಟಿಎಫ್) ದಾಖಲಿಸಿರುವ ಎಫ್‌ಐಆರ್ ಪ್ರಶ್ನಿಸಿ ರವಿಶಂಕರ್ ಗುರೂಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ರವಿಶಂಕರ್‌ ವಿರುದ್ಧದ ಪ್ರಕರಣ ರದ್ದುಪಡಿಸಿರುವ ನ್ಯಾಯಪೀಠ, ಆದೇಶದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ಪರಿಗಣಿಸುವುದಕ್ಕೆ ಮಾತ್ರ ಸೀಮಿತವಾಗಿದೆ. ಯಾವುದೇ ಸಕ್ಷಮ ನ್ಯಾಯಾಲಯದ ಮುಂದೆ ಬಾಕಿ ಇರುವ ಯಾವುದೇ ಆರೋಪಗಳಿಗೆ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶಿಸಿದೆ. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಒತ್ತುವರಿ ಮಾಡಿದ ಆರೋಪ

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಕಗ್ಗಲೀಪುರ ಗ್ರಾಮದ ಸರ್ವೇ ನಂಬರ್ 46, 135, 137, 150, 160, 164/1 ಮತ್ತು 164/2ರಲ್ಲಿನ ವಿವಿಧೆಡೆ ಸರ್ಕಾರಿ ಜಮೀನು, ಕೆರೆ ಮತ್ತು ರಾಜಕಾಲುವೆ ಒತ್ತುವರಿ ಮಾಡಿದ ಆರೋಪ ಅರ್ಜಿದಾರರ ಮೇಲಿತ್ತು. ಈ ಹಿನ್ನೆಲೆಯಲ್ಲಿ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿತ್ತು.

ಅದನ್ನು ರದ್ದುಪಡಿಸಲು ಕೋರಿದ್ದ ರವಿಶಂಕರ್‌ ಗುರೂಜಿ, ತಾವು ಯಾವುದೇ ಆಸ್ತಿ ಹೊಂದಿರುವ ಅಥವಾ ಯಾವುದೇ ಭೂಮಿಯನ್ನು ಅತಿಕ್ರಮಿಸಿರುವುದನ್ನು ಬಿಎಂಟಿಎಫ್‌ ವರದಿ ತೋರಿಸುವುದಿಲ್ಲ. ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ಸೇರಿ ಕೆಲವರ ವಿರುದ್ಧ ಒತ್ತುವರಿ ಮಾಡಿರುವ ಆರೋಪವಿದೆ. ಆದರೆ, ಈ ಯಾವುದೇ ಪ್ರದೇಶ ತಮ್ಮ ಆಶ್ರಮದ ಕಾಂಪೌಂಡ್ ಒಳಗೆ ಬರುವುದಿಲ್ಲ ಎಂದು ಆಕ್ಷೇಪಿಸಿದ್ದರು.

ಅರ್ಜಿಗೆ ಆಕ್ಷೇಪಿಸಿದ್ದ ಸರ್ಕಾರಿ ಅಭಿಯೋಜಕರು, ರವಿಶಂಕರ್‌ ಗುರೂಜಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಗಳಿವೆ. ಈ ಹಂತದಲ್ಲಿ ತನಿಖೆ ತಡೆಯಬಾರದು. ತನಿಖೆ ಮುಂದುವರಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಇನ್ನು ನಗರದ ರಸ್ತೆಗಳಲ್ಲೂ ವಿದೇಶಿ ಮಾದರಿ 'ಪೇ ಪಾರ್ಕಿಂಗ್' ಸಿಸ್ಟಂ
25 ವರ್ಷದ ಭೂಸ್ವಾಧೀನ ಕಾನೂನು ಸಮರದಲ್ಲಿ ಎಪಿಎಂಸಿಗೆ ಜಯ