ಕಪ್‌ ತುಳಿತ : ವರದಿ ಸಲ್ಲಿಕೆಗೆ 30 ದಿನ ಅವಕಾಶ

Published : Jun 27, 2025, 09:57 AM IST
Karnataka Crowd Control Bill 2025 Strict Law After RCB Victory Stampede Tragedy

ಸಾರಾಂಶ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿ ಸಲ್ಲಿಸುವ ಕಾಲಾವಧಿಯನ್ನು ಹೆಚ್ಚುವರಿಯಾಗಿ ಒಂದು ತಿಂಗಳು ವಿಸ್ತರಿಸಲಾಗಿದೆ.

  ಬೆಂಗಳೂರು :  ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿ ಸಲ್ಲಿಸುವ ಕಾಲಾವಧಿಯನ್ನು ಹೆಚ್ಚುವರಿಯಾಗಿ ಒಂದು ತಿಂಗಳು ವಿಸ್ತರಿಸಲಾಗಿದ್ದು, ಜುಲೈ ಕೊನೆಯ ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಸಾಧ್ಯತೆ ಇದೆ.

15 ದಿನಗಳ ಕಾಲಾವಕಾಶ ಮುಕ್ತಾಯಗೊಂಡಿರುವ ಕಾರಣ ಜೂ.19ರಿಂದ ಅನ್ವಯವಾಗುವಂತೆ 30 ದಿನ ಕಾಲಾವಕಾಶ ವಿಸ್ತರಿಸಲಾಗಿದೆ. ಈಗಾಗಲೇ ಮೃತರ ಕುಟುಂಬದವರು, ಗಾಯಾಳುಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಕೆಎಸ್‌ಸಿಎ ಸೇರಿ ಸಂಬಂಧಿಸಿದ ಎಲ್ಲ ವ್ಯಕ್ತಿಗಳಿಂದ ಹೇಳಿಕೆ ದಾಖಲಿಸಿಕೊಂಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು, ಶುಕ್ರವಾರದಂದು ಕೊನೆಯದಾಗಿ ಮತ್ತೊಮ್ಮೆ ಸಾರ್ವಜನಿಕರಿಂದ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ. ಅದಾದ ಬಳಿಕ ದಾಖಲೆಗಳ ಪರಿಶೀಲಿಸಿ ಬಳಿಕ ವರದಿಯನ್ನು ಸಿದ್ದಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಜೂ.4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ವೀಕ್ಷಣೆಗೆ ಲಕ್ಷಾಂತರ ಅಭಿಮಾನಗಳು ಏಕಾಏಕಿ ಆಗಮಿಸಿದ ಕಾರಣ ಉಂಟಾದ ನೂಕು ನುಗ್ಗಲಿನಲ್ಲಿ 11 ಜನ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಘಟನೆಯ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಸರ್ಕಾರ ಆದೇಶಿಸಿದೆ.

ವಿಚಾರಣೆಗೆ ಐಪಿಎಸ್‌ ದಯಾನಂದ್‌

ಘಟನೆಗೆ ಸಂಬಂಧಿಸಿ ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಗುರುವಾರ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದರು. ಕಾರ್ಯಕ್ರಮ ಆಯೋಜನೆಗೆ ಕೆಎಸ್‌ಸಿಎ ಸೇರಿ ಸಂಬಂಧಿಸಿದ ಸಂಸ್ಥೆಗಳು ಅನುಮತಿ ಕೋರಿರುವುದು, ಭದ್ರತಾ ಕ್ರಮಗಳು, ಸಾವು ನೋವಿನ ಮಾಹಿತಿ ಸೇರಿ ಇನ್ನಿತರ ವಿಚಾರಗಳ ಬಗ್ಗೆ ವಿಚಾರಣಾಧಿಕಾರಿ ಹೇಳಿಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ. ಘಟನೆ ದಿನ ಟ್ರಾಫಿಕ್ ನಿಯಂತ್ರಣಕ್ಕೆ ಕೈಗೊಂಡಿದ್ದ ಕ್ರಮಗಳ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಅವರಿಂದಲೂ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.

PREV
Read more Articles on

Recommended Stories

ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌
ಸಂಜೆ ಕೋರ್ಟ್‌ಗೆ ವಕೀಲರ ಸಂಘಗಳ ವಿರೋಧ