ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ

Published : Jul 07, 2025, 10:28 AM IST
KN Rajanna

ಸಾರಾಂಶ

ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

  ಚನ್ನರಾಯಪಟ್ಟಣ  : ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಮಾಧ್ಯಮಗಳಲ್ಲಿ ವರದಿಯಾಗಿರುವ ಹೃದಯಾಘಾತ ಮರಣಗಳ ವಾಸ್ತವಾಂಶ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೃದಯಾಘಾತಕ್ಕೆ ಕಾರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.

ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಸ್ಪತ್ರೆಗಳಲ್ಲಿಯೂ ಈ ಬಗ್ಗೆ ಸಂಬಂಧಿಸಿದ ಸೌಲಭ್ಯ ಒದಗಿಸಲು ಸರ್ಕಾರ ಸಿದ್ಧವಾಗಿದ್ದು, ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಎನ್ನಲಾದ ಪ್ರಕರಣಗಳ ಬಗ್ಗೆ ತನಿಖೆ ಹಾಗೂ ಮಾಹಿತಿ ಪಡೆಯಲು ಈಗಾಗಲೇ ಹೃದ್ರೋಗ ತಜ್ಞರ ತಂಡ ರಚಿಸಿದ್ದು ವರದಿ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.

ಹೃದಯಾಘಾತಕ್ಕೆ ಆಹಾರ ಪದ್ಧತಿ ಬದಲಾವಣೆ, ಬದಲಾದ ಜೀವನ ಶೈಲಿ, ವಂಶ ಪಾರ್ಯಂಪಾರ್ಯ ಹೀಗೆ ಹತ್ತು ಹಲವು ಕಾರಣಗಳಿವೆ. ಆದರೆ, ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ಖಚಿತ ಮಾಹಿತಿ ಪಡೆಯಲು ಮೃತಪಟ್ಟ ಕುಟುಂಬದ ಮನ ಒಲಿಸಿ ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆ ಮಾಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಲ್ಲದೆ ಇನ್ನೊಂದು ವಾರದ ಒಳಗಾಗಿ ಹಾಸನ ಜಿಲ್ಲೆಗೆ ಹೆಚ್ಚುವರಿ ಹೃದ್ರೋಗ ತಜ್ಞ ವೈದ್ಯರ ನೇಮಕಾತಿಗೆ ಕ್ರಮ ವಹಿಸಲಾಗುವುದು, ಜೊತೆಗೆ ಅಗತ್ಯ ಇರುವ ವೈದ್ಯಕೀಯ ಉಪಕರಣಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು. ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಅಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ ಇದರ ಬಗ್ಗೆ ಜನರಲ್ಲಿ ಗೊಂದಲ ಬೇಡ ಎಂದರು.

 

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಪಲ್ಸ್‌ ಪೋಲಿಯೋ ಲಸಿಕೆ: ಶೇ.100 ಗುರಿ ಸಾಧನೆ ವಿಶ್ವಾಸ
೨೧ರಂದು ಬೆಂಗಳೂರು ಚಲೋ