ನದಿಗೆ ಇಳೀಬೇಡಿ ಕೊಚ್ಚಿ ಹೋಗ್ತೀರ : ಹೋರಾಟಗಾರರಿಗೆ ಸಿಎಂ ಎಚ್ಚರಿಕೆ

Published : Aug 02, 2026, 07:06 AM IST
DK Shivakumar

ಸಾರಾಂಶ

ಕಬಿನಿ ಜಲಾಶಯ ತುಂಬುತ್ತಿದೆ. ಹೆಚ್ಚಿನ ಪ್ರಮಾಣದ ನೀರು ಹೊರಗೆ ಬಿಡಲೇಬೇಕು. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಮೈಸೂರು :  ಕಬಿನಿ ಜಲಾಶಯ ತುಂಬುತ್ತಿದೆ. ಹೆಚ್ಚಿನ ಪ್ರಮಾಣದ ನೀರು ಹೊರಗೆ ಬಿಡಲೇಬೇಕು. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಯಾವುದೇ ಹೋರಾಟಗಾರರು ಜಲಾಶಯದ ಬಳಿ ಹೋಗಬೇಡಿ

ಮೈಸೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಹೋರಾಟಗಾರರು ಜಲಾಶಯದ ಬಳಿ ಹೋಗಬೇಡಿ. ನೀರು ಬಿಡುವುದಿಲ್ಲ ಅಂತಾ ನದಿಗೆ ಇಳಿಯಬೇಡಿ. ಆ ರೀತಿ ಇಳಿದರೆ ಕೊಚ್ಚಿಕೊಂಡು ಹೋಗುತ್ತೀರ. ಜೀವ ಅಮೂಲ್ಯವಾದದ್ದು. ಯಾರು ಈ ರೀತಿಯ ಸಾಹಸಕ್ಕೆ ಕೈ ಹಾಕಬೇಡಿ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕೆಂದು ಮನವಿ ಮಾಡಿದರು.

ನೀರಿನ ಸಂಗ್ರಹಣೆ ಬಗ್ಗೆ  ಪ್ರತಿ ಗಂಟೆಯೂ ಮಾಹಿತಿ

ಕಬಿನಿ ಜಲಾಶಯದ ನೀರಿನ ಸಂಗ್ರಹಣೆ ಬಗ್ಗೆ ಅಧಿಕಾರಿಗಳು ಪ್ರತಿ ಗಂಟೆಯೂ ಮಾಹಿತಿ ನೀಡುತ್ತಿದ್ದಾರೆ. ಪ್ರಕೃತಿ ಯಾರ ಸ್ವತ್ತೂ ಅಲ್ಲ. ಪ್ರಕೃತಿಯ ಅಣತಿಯಂತೆ ನಾವು ಬದುಕುತ್ತಿದ್ದೇವೆ. ನಾವು ನೀರು ಬಿಡುಗಡೆ ಮಾಡಲ್ಲ ಎಂದು ತೀರ್ಮಾನ ಮಾಡಿದರೂ, ಜಲಾಶಯ ತುಂಬಿದಾಗ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಹೋರಾಟಗಾರರು ನೀರು ಬಿಡುವ ಕಡೆ ಹೋಗಬಾರದು. ನೀರಿನ ರಭಸಕ್ಕೆ ನೀವು ಕೊಚ್ಚಿ ಹೋಗಬಹುದು. ‌ಯಾರೂ ನೀರಿಗೆ ಅಡ್ಡ ಮಲಗಲು ಹೋಗಬೇಡಿ ಎಂದು ಕೋರಿದರು.

ನಮ್ಮ ಸ್ನೇಹಿತರು ತಮಿಳುನಾಡಿಗೆ ನೀರು ಹರಿಸಬಾರದು ಎಂದು ಹೋರಾಟ, ಬಂದ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಒಂದು ಹೋರಾಟಕ್ಕೆ ಹಿನ್ನೆಲೆ ಇರಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಹೋರಾಟಕ್ಕೂ ಗೌರವವಿದೆ. ಆದರೆ ಈಗ ಪ್ರತಿಭಟನೆ ಬೇಡ. ಕಾನೂನು ಚೌಕಟ್ಟಿಗೆ ಏನೂ ತೊಂದರೆ ಆಗಬಾರದು, ಜನಜೀವನಕ್ಕೆ ತೊಂದರೆಯಾಗಬಾರದು. ಈ ರಾಜ್ಯದಲ್ಲಿ ಎಲ್ಲಾ ಜನರು ಬದುಕುತ್ತಿದ್ದಾರೆ. ಎಲ್ಲರನ್ನೂ ಸಂತೋಷದಿಂದ ಸ್ವೀಕಾರ ಮಾಡಿದ್ದೇವೆ. ತಮಿಳುನಾಡು ಸೇರಿದಂತೆ ನಾವೆಲ್ಲರೂ ಒಂದೇ ದೇಶದ ಪ್ರಜೆಗಳು ಎಂದು ತಿಳಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕಾವೇರಿ ‘ವರಿ’ ಚರ್ಚೆಗೆ ಇಂದು ಸರ್ವ ಪಕ್ಷ ಸಭೆ
ಹಲವಡೆ ಭಾರೀ ಮಳೆ, ಡ್ಯಾಂಗಳಿಗೆ ಭರ್ಜರಿ ನೀರು