ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್

Published : Jun 15, 2025, 01:00 PM IST
Home Minister dr g Parameshwar

ಸಾರಾಂಶ

ಅನ್ಯ ರಾಜ್ಯಗಳಲ್ಲಿನ ವಿವರ ಪಡೆದು ಪೊಲೀಸ್ ಕಾನ್‌ಸ್ಟೆಬಲ್‌ ಅಭ್ಯರ್ಥಿಗಳ ವಯೋಮಿತಿ 33 ವರ್ಷಕ್ಕೆ ಏರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಪರಮೇಶ್ವರ್ ಹೇಳಿದರು.

 ಕುಂದಾಪುರ: ಅನ್ಯ ರಾಜ್ಯಗಳಲ್ಲಿನ ವಿವರ ಪಡೆದು ಪೊಲೀಸ್ ಕಾನ್‌ಸ್ಟೆಬಲ್‌ ಅಭ್ಯರ್ಥಿಗಳ ವಯೋಮಿತಿ 33 ವರ್ಷಕ್ಕೆ ಏರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಪರಮೇಶ್ವರ್ ಹೇಳಿದರು. 

ಅವರು ಶನಿವಾರ ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಬ್ಬಂದಿ ಕೊರತೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. 

ಪ್ರತಿಯೊಂದು ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಲ್ಲ ಜಾತಿ, ಸಮುದಾಯದ ಸಣ್ಣ, ದೊಡ್ಡ ಪ್ರಾರ್ಥನಾ ಮಂದಿರಗಳಿಗೆ ರಾತ್ರಿ ಬೆಳಕಿನ ಸೌಲಭ್ಯ ಹಾಗೂ ಸಿಸಿಟಿವಿ ಅಳವಡಿಸಿ, ಅದರ ಮಾಹಿತಿ ಪ್ರತಿದಿನ ಠಾಣಾ ವ್ಯಾಪ್ತಿಯಲ್ಲಿ ಬರುವಂತೆಯೂ ಗೃಹಸಚಿವರು ಸಲಹೆ ನೀಡಿದರು.

PREV
Read more Articles on

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು