ಕಬ್ಬು ಕಿಚ್ಚು; ಇಂದು ಕೇಂದ್ರ ತಂಡದಿಂದ ಬೆಂಗ್ಳೂರಲ್ಲಿ ಸಭೆ?

Published : Oct 29, 2026, 07:08 AM IST
Belagavi Sugarcane Farmers protest

ಸಾರಾಂಶ

ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಮಸ್ಯೆ ಆಲಿಸಲು ಕೇಂದ್ರ ಸರ್ಕಾರ ರಚಿಸಿರುವ ಡಾ.ರಮೇಶ ಚಾಂದ್ ನೇತೃತ್ವದ ಉನ್ನತ ಮಟ್ಟದ ಅಧಿಕಾರಿಗಳ ಜಂಟಿ ಸಮಿತಿ ಗುರುವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿದೆ

ಬೆಳಗಾವಿ/ಬೆಂಗಳೂರು : ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಮಸ್ಯೆ ಆಲಿಸಲು ಕೇಂದ್ರ ಸರ್ಕಾರ ರಚಿಸಿರುವ ಡಾ.ರಮೇಶ ಚಾಂದ್ ನೇತೃತ್ವದ ಉನ್ನತ ಮಟ್ಟದ ಅಧಿಕಾರಿಗಳ ಜಂಟಿ ಸಮಿತಿ ಗುರುವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿದೆ ಎಂದು ದೆಹಲಿಯ ಮೂಲಗಳು ತಿಳಿಸಿವೆ. ಆದರೆ, ಸಭೆ ನಡೆಯುವ ಬಗ್ಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಯಾವುದೇ ಖಚಿತ ಮಾಹಿತಿ ನೀಡಿಲ್ಲ.

ಪ್ರತಿ ಟನ್‌ ಕಬ್ಬಿಗೆ ₹5,500 ಕನಿಷ್ಠ ಬೆಲೆ ನಿಗದಿ ಸೇರಿ ವಿವಿಧ ಬೇಡಿಕೆ

ಪ್ರತಿ ಟನ್‌ ಕಬ್ಬಿಗೆ ₹5,500 ಕನಿಷ್ಠ ಬೆಲೆ ನಿಗದಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ಜಂಟಿ ಸಮಿತಿ ರಚಿಸಿತ್ತು. ಈ ಸಮಿತಿ ಗುರುವಾರ ಮತ್ತು ಶುಕ್ರವಾರ, ಎರಡು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿದೆ. ಗುರುವಾರ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಿದೆ. ಶುಕ್ರವಾರ ಕಬ್ಬು ಬೆಳೆಗಾರರ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಮಾತುಕತೆ ನಡೆಸಲಿದ್ದು, ಅವರ ಸಮಸ್ಯೆಗಳನ್ನು ಆಲಿಸಲಿದೆ ಎಂದು ದೆಹಲಿಯ ಮೂಲಗಳು ಹೇಳಿವೆ. ಆದರೆ, ಅಧಿಕಾರಿಗಳ ಸಭೆ ನಡೆಯುವುದನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ದೃಢಪಡಿಸಿಲ್ಲ.

ಈ ಮಧ್ಯೆ, ಬೆಳಗಾವಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಮತ್ತು ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ, ಕೇಂದ್ರ ಸರ್ಕಾರದ ಸಮಿತಿ ಗುರುವಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರಿಗೆ ಬರುವಂತೆ ರೈತ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಆದರೆ, ಸಮಿತಿಯ ಅಧಿಕಾರಿಗಳು ಕಬ್ಬು ಬೆಳೆಯುವ ಪ್ರಮುಖ ಪ್ರದೇಶವಾಗಿರುವ ಬೆಳಗಾವಿಗೆ ಬಂದು ರೈತರ ಸಮಸ್ಯೆ ಆಲಿಸಬೇಕು. ತಾವು ಬೆಂಗಳೂರಿಗೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ಸಭೆಯ ಸುತ್ತ

- ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕಾಗಿ ರಾಜ್ಯದ ರೈತರಿಂದ ಅನೇಕ ದಿನಗಳಿಂದ ಪ್ರತಿಭಟನೆ

- ರೈತರ ಅಹವಾಲು ಆಲಿಸಲು ಕೇಂದ್ರ ಸಮಿತಿ ಗುರುವಾರ ಬೆಂಗಳೂರಿಗೆ: ದಿಲ್ಲಿ ಮೂಲಗಳು

- ಆದರೆ ಸಭೆ ನಡೆಯುವ ಬಗ್ಗೆ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ಖಚಿತ ಮಾಹಿತಿ ಇಲ್ಲ

- ಬೆಳಗಾವಿಗೆ ಕೇಂದ್ರ ಸಮಿತಿ ಬರಲಿ, ನಾವು ಬೆಂಗಳೂರಿಗೆ ಹೋಗಲ್ಲ: ರೈತ ಮುಖಂಡರು

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಸಾಲ ನೀಡದ್ದಕ್ಕೆ ಬೇಕರಿ ಮಾಲೀಕರಿಗೆ ಧಮ್ಕಿ ಹಾಕಿ ದಾಂಧಲೆ : ಇಬ್ಬರ ಬಂಧನ
ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್