ಸುಹಾಸ್‌ ಶೆಟ್ಟಿ ಕೊಲೆ ಕೇಸ್‌ : ಎನ್‌ಐಎಯಿಂದ ತನಿಖೆ ಶುರು

Published : Jun 15, 2025, 10:59 AM IST
Suhas Shetty

ಸಾರಾಂಶ

ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರಂಭ ಮಾಡಿದೆ.

 ಮಂಗಳೂರು :  ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರಂಭ ಮಾಡಿದೆ.

ರಾಷ್ಟ್ರೀಯ ತನಿಖಾ ದಳದ ಡಿವೈಎಸ್ಪಿ ಪವನ್‌ ಕುಮಾರ್‌ ನೇತೃತ್ವದ ತನಿಖಾ ತಂಡ ಶನಿವಾರ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರು ಸಿಸಿಬಿ ಹಾಗೂ ಬಜ್ಪೆ ಠಾಣೆ ಪೊಲೀಸರಿಂದ ಪೂರಕ ಮಾಹಿತಿ ಕಲೆಹಾಕಿದೆ. ಹತ್ಯೆಯ ಸಂಪೂರ್ಣ ವಿವರ, ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್‌ಐ ಕಾರ್ಯಕರ್ತರ ಕೈವಾಡವಿದ್ದು, ವಿದೇಶದಿಂದ ಫಂಡಿಂಗ್‌ ಮಾಡಿರುವ ಸಾಧ್ಯತೆಯಿದೆ. ಈ ಕಾರಣದಿಂದ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಒತ್ತಾಯಿಸಿದ್ದರು. ಅಲ್ಲದೆ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಒತ್ತಾಯಿಸಿದ್ದರು. ಕೊಲೆಯನ್ನು ಖಂಡಿಸಿ ಬಜ್ಪೆಯಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿತ್ತು.

PREV
Read more Articles on

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ