ಮೊಬೈಲ್ ತಂತ್ರಾಂಶದ ಮೂಲಕ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ: ಹೆಸರು ನೋಂದಣಿಗೆ ಡಿ.20ಕ್ಕೆ ಕೊನೆ ದಿನ

ಸಾರಾಂಶ

ನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಗಣತಿಗೆ ನಡೆಸಲಾಗುತ್ತಿರುವ ಸಮೀಕ್ಷೆ ಡಿ.20ಕ್ಕೆ ಕೊನೆಗೊಳ್ಳಲಿದ್ದು, ಈವರೆಗೆ 23 ಸಾವಿರ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಬೆಂಗಳೂರು  : ನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಗಣತಿಗೆ ನಡೆಸಲಾಗುತ್ತಿರುವ ಸಮೀಕ್ಷೆ ಡಿ.20ಕ್ಕೆ ಕೊನೆಗೊಳ್ಳಲಿದ್ದು, ಈವರೆಗೆ 23 ಸಾವಿರ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಗಣತಿದಾರರಿಂದ ಮೊಬೈಲ್ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಈವರೆಗೆ 23,407 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಹೆಸರುಗಳನ್ನು ನೊಂದಾಯಿಸಿಕೊಳ್ಳುವುದಕ್ಕೆ ಡಿ.20ರ ಒಳಗೆ ಆಯಾವಲಯ ಜಂಟಿ ಆಯುಕ್ತರ ಕಚೇರಿಗಳಿಗೆ ಭೇಟಿ ನೀಡಬೇಕು. ಡಿ.20ರ ನಂತರ ಬಂದವರ ಹೆಸರು ನೋಂದಾಯಿಸುವುದಿಲ್ಲ ಹಾಗೂ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಭೇಟಿ ನೀಡುವ ವೇಳೆ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್, ಕುಟುಂಬ ಪಡಿತರ ಚೀಟಿ, ಕುಟುಂಬ ಸದಸ್ಯರ ಮಾಹಿತಿ, ಸ್ವಯಂ ಘೋಷಣೆ ಪ್ರಮಾಣಪತ್ರ ತೆಗೆದುಕೊಂಡು ಹೋಗಬೇಕು.

 ಈವರೆಗೆ ಗುರುತಿಸಲಾದ ಬೀದಿ ಬದಿ ವ್ಯಾಪಾರಿಗಳ ವಿವರ 

 ವಲಯ ಬೀದಿಬದಿ ವ್ಯಾಪಾರಿಗಳ ಸಂಖ್ಯೆ 

ಪಶ್ಚಿಮ 5,727

ದಕ್ಷಿಣ 4,417

ಆರ್.ಆರ್ ನಗರ 3,448

ಪೂರ್ವ 3,067

ಬೊಮ್ಮನಹಳ್ಳಿ 2,156

ಮಹದೇವಪುರ 1,669

ಯಲಹಂಕ 1,572

ದಾಸರಹಳ್ಳಿ 1,351

ಒಟ್ಟು 23,407

Share this article