ಮಲ್ಲತಹಳ್ಳಿಯ ಜೆ.ಎಸ್. ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ ಸಮಾರಂಭ’ ಆಯೋಜಿಸಲಾಗಿದೆ.
ಬೆಂಗಳೂರು: ಜೆ.ಎಸ್.ಪೂರ್ವ ಕಾಲೇಜು, ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಹಯೋಗದಲ್ಲಿ ಸೆಪ್ಟೆಂಬರ್ 28ರಂದು ಬೆಳಗ್ಗೆ 9ಕ್ಕೆ ಮಲ್ಲತಹಳ್ಳಿಯ ಜೆ.ಎಸ್. ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ ಸಮಾರಂಭ’ ಆಯೋಜಿಸಲಾಗಿದೆ.
ಕನ್ನಡಪ್ರಭ ದಿನಪತ್ರಿಕೆ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ದುರ್ಗಾಪರಮೇಶ್ವರಿ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಪ್ರೊ. ಡಾ। ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕನ್ನಡಪ್ರಭದ ಸಮನ್ವಯ ಮತ್ತು ವಿಶೇಷ ಯೋಜನೆ ಸಂಪಾದಕ ಬಿ.ವಿ.ಮಲ್ಲಿಕಾರ್ಜುನಯ್ಯ, ಸಹಾಯಕ ಜನರಲ್ ಮ್ಯಾನೇಜರ್ ಮಂಜುನಾಥ್ ದ್ಯಾವನ ಗೌಡರು ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.