ಬಿ.ಸರೋಜಾದೇವಿ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಲು ಸಿಎಂಗೆ ತಾರಾ ಮನವಿ

Published : Jul 24, 2025, 12:42 PM IST
Thara

ಸಾರಾಂಶ

ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಯಾವುದಾದರೊಂದು ಪ್ರಶಸ್ತಿಯನ್ನು ಇತ್ತೀಚೆಗೆ ಅಗಲಿದ ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಹೆಸರಿನಲ್ಲಿ ನೀಡುವಂತೆ ನಟಿ ತಾರಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

  ಬೆಂಗಳೂರು :  ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಯಾವುದಾದರೊಂದು ಪ್ರಶಸ್ತಿಯನ್ನು ಇತ್ತೀಚೆಗೆ ಅಗಲಿದ ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ಅವರ ಹೆಸರಿನಲ್ಲಿ ನೀಡುವಂತೆ ನಟಿ ತಾರಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಟಿ ತಾರಾ ಅವರು ಈ ಕುರಿತು ಮನವಿ ಪತ್ರ ಸಲ್ಲಿಸಿದರು. ಈ ಮನವಿ ಪತ್ರದಲ್ಲಿ ಅವರು, ‘ಈಗಾಗಲೇ ಹಲವು ಸಾಧಕರ ಹೆಸರುಗಳಲ್ಲಿ ರಾಜ್ಯ ಸರ್ಕಾರ ಚಲನಚಿತ್ರ ಪ್ರಶಸ್ತಿ ನೀಡುತ್ತಿದೆ. 

ಈಗ ಹೊಸದಾಗಿ ಹಿರಿಯ ನಟಿ ಜಯಂತಿ ಅವರ ಹೆಸರಿನಲ್ಲೂ ಪ್ರಶಸ್ತಿ ನೀಡುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ. ಇತ್ತೀಚೆಗಷ್ಟೆ ನಿಧನರಾದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರು. ನಟನೆಯ ಜೊತೆಗೆ ಕಷ್ಟದಲ್ಲಿರುವ ಹಲವು ಕಲಾವಿದರಿಗೆ ಸಹಾಯ ಮಾಡಿದ್ದಾರೆ. ಅವರ ನಟನೆ ಮತ್ತು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಅವರ ಹೆಸರಿನಲ್ಲೂ ರಾಜ್ಯ ಚಲನಚಿತ್ರ ಪ್ರಶಸ್ತಿ ನೀಡಿದರೆ ಉತ್ತಮ’ ಎಂದು ಅವರು ಹೇಳಿದ್ದಾರೆ.

 

PREV
Read more Articles on

Recommended Stories

ಡಿಕೆ ಮಹದಾಯಿ ಹೇಳಿಕೆಗೆ ಗೋವಾ ಸಿಎಂ ಆಕ್ರೋಶ
ಎಸ್ಸೆಸ್ಸೆಲ್ಸಿ ಪಾಸ್‌ಗೆ 33% ಅಂಕ: ಮಿಶ್ರ ಪ್ರತಿಕ್ರಿಯೆ