ರಾಜ್ಯದಲ್ಲಿ ಬಿಸಿಲಿನ ತಾಲ ಇನ್ನಷ್ಟು ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹಗಲ ವೇಳೆ ಮನೆಯಿಂದ ಹೊರ ಬರಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಲ ಇನ್ನಷ್ಟು ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹಗಲ ವೇಳೆ ಮನೆಯಿಂದ ಹೊರ ಬರಲು ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬಿಸಿಲನಾಡು ಕಲಬುರಗಿಯಲ್ಲಿ ಈಗಾಗಲೇ ಗರಿಷ್ಠ ಉಷ್ಣಾಂಶ 37 ಡಿ.ಸೆ.ಗಿಂತ ಹೆಚ್ಚು ದಾಖಲಾಗುತ್ತಿದೆ. ಗುರುವಾರ ಮತ್ತು ಶುಕ್ರವಾರ ಕಲಬುರಗಿಯಲ್ಲಿ ಸತತ 37.6 ಡಿ.ಸೆ. ದಾಖಲಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ 1.8 ಡಿ.ಸೆ. ಹೆಚ್ಚು. ಈ ಅವಧಿಯಲ್ಲಿ ಕಲಬುರಗಿಯಲ್ಲಿ 35.8 ಡಿ.ಸೆ. ಸಾಮಾನ್ಯ ಗರಿಷ್ಠ ಉಷ್ಣಾಂಶವಿರುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಳಿದಂತೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿ.ಸೆ.ದಾಟಿದೆ. ಕಾರವಾರದಲ್ಲೂ 35 ಡಿ.ಸೆ ಗಿಂತ ಹೆಚ್ಚಾಗಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಾಮರಾಜನಗರದಲ್ಲಿ ಗರಿಷ್ಠ ಉಷ್ಣಾಂಶ 35 ಡಿ.ಸೆ. ಗಿಂತ ಹೆಚ್ಚು ದಾಖಲಾದ ವರದಿಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 33.4 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ.