ದೇಶದ ಆರ್ಥಿಕತೆಗೆ ಹೋಟೆಲ್‌ ಉದ್ಯಮದ ಕೊಡುಗೆ ಗಮನಾರ್ಹ: ಗವರ್ನರ್‌ ಗೆಹಲೋತ್‌

Published : May 30, 2025, 08:11 AM IST
thavar chand gehlot

ಸಾರಾಂಶ

ಹೋಟೆಲ್‌ ಉದ್ಯಮ ದೇಶದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದು, 30 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಶ್ಲಾಘಿಸಿದರು.

  ಬೆಂಗಳೂರು : ಹೋಟೆಲ್‌ ಉದ್ಯಮ ದೇಶದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದು, 30 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಶ್ಲಾಘಿಸಿದರು.

ಗುರುವಾರ ನಗರದ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಕರ್ನಾಟಕ ಹೋಟೆಲ್‌ಗಳ ಸಂಘ ಆಯೋಜಿಸಿದ್ದ ಸಂಘದ 70ನೇ ವರ್ಷಾಚರಣೆ ಹಾಗೂ ‘ಆತಿಥ್ಯ ರತ್ನ’ ಮತ್ತು ‘ಉದ್ಯಮ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಹೋಟೆಲ್‌ ಉದ್ಯಮ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉದ್ಯೋಗದಾತ ಉದ್ಯಮವಾಗಿ ಗುರುತಿಸಿಕೊಂಡಿದ್ದು, ಸ್ಥಳೀಯರಿಗೆ ಉದ್ಯೋಗ ಒದಗಿಸುತ್ತಿದೆ. ಪ್ರವಾಸಿ ಸ್ಥಳಗಳಲ್ಲಿ ದೂರದಿಂದ ಬರುವಂತಹ ಪ್ರವಾಸಿಗರಿಗೆ ಶುಚಿ-ರುಚಿಯಾದ ಖಾದ್ಯಗಳನ್ನು ಒದಗಿಸಿ ಭಾರತೀಯ ಸಂಸ್ಕೃತಿ ಪಸರಿಸುತ್ತಿದೆ. ಈ ಮೂಲಕ ಪ್ರವಾಸೋದ್ಯಮದ ಪ್ರಗತಿಗೂ ಸಹಕಾರಿಯಾಗಿದ್ದು, ನಾಡಿನ ಸಂಸ್ಕೃತಿ-ಪರಂಪರೆಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸುವ ಕೆಲಸ ಮಾಡುತ್ತಿದೆ ಎಂದರು.

ಶಾಸಕ ಡಾ.ಸಿ.ಎನ್‌.ಅಶ್ವತ್‌ನಾರಾಯಣ ಮಾತನಾಡಿದರು. ಸಮಾರಂಭದಲ್ಲಿ ಹಲವು ಸಾಧಕರಿಗೆ ಆತಿಥ್ಯ ರತ್ನ ಮತ್ತು ಉದ್ಯಮ ರತ್ನ'''''''' ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಘದ ಅಧ್ಯಕ್ಷ ಜಿ.ಕೆ.ಶೆಟ್ಟಿ, ಗೌರವಾಧ್ಯಕ್ಷ ಚಂದ್ರಶೇಖರ್​ ಹೆಬ್ಬಾರ್​, ಮಾಜಿ ಅಧ್ಯಕ್ಷ ಸಿ.ವಿ. ಮಹದೇವಯ್ಯ, ಹೋಟೆಲ್​ ಮತ್ತು ರೆಸ್ಟೋರೆಂಟ್​ ಸಂಗಳ ಒಕ್ಕೂಟದ ಅಧ್ಯಕ್ಷ ಕೆ.ಶ್ಯಾಮರಾಜು ಮತ್ತಿತರರಿದ್ದರು.

PREV
Read more Articles on

Recommended Stories

ನನ್ನ ಬಗ್ಗೆ ಮಾತನಾಡುವವರಿಗೆ ಸಿಗಂದೂರು ಚೌಡೇಶ್ವರಿ ತಕ್ಕ ಬುದ್ಧಿ ಕಲಿಸಲಿದ್ದಾಳೆ : ಮಧು ಬಂಗಾರಪ್ಪ
ಮಕ್ಕಳ ಕುಬ್ಜ ಬೆಳವಣಿಗೆ: 2 ಜಿಲ್ಲೆಯ ಸ್ಥಿತಿ ಕಳವಳ