ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆ ಫಲಿತಾಂಶ ಪ್ರಕಟ

ಸಾರಾಂಶ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ತಿಳಿಸಿದೆ.

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ತಿಳಿಸಿದೆ.

 ಜತೆಗೆ ಅಂತಿಮ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ. ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳನ್ನು ನ.28ರಂದು ಸಂಜೆ 4ಗಂಟೆ ಒಳಗೆ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನಾಂಕ ವಿಸ್ತರಣೆ:

ಬಿಎಸ್ಸಿ ನರ್ಸಿಂಗ್ ಮತ್ತು ಅಲೈಡ್‌ ಹೆಲ್ತ್‌ ಸೈನ್ಸ್‌ ಕೋರ್ಸುಗಳಿಗೆ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ನ.28ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ನ.29ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Share this article