ಉಚಿತ ಪ್ರಯಾಣದ ಟಿಕೆಟ್ ಜೋಡಿಸಿ ಹಾರ ಮಾಡಿ ವಿದ್ಯಾರ್ಥಿನಿಯೊಬ್ಬರು ಸಿಎಂಗೆ ಹಾಕಿದ ಘಟನೆ ಅರಸಿಕೆರೆಯಲ್ಲಿ ನಡೆದಿದೆ.
ಹಾಸನ : ಉಚಿತ ಪ್ರಯಾಣದ ಟಿಕೆಟ್ ಜೋಡಿಸಿ ಹಾರ ಮಾಡಿ ವಿದ್ಯಾರ್ಥಿನಿಯೊಬ್ಬರು ಸಿಎಂಗೆ ಹಾಕಿದ ಘಟನೆ ಅರಸಿಕೆರೆಯಲ್ಲಿ ನಡೆದಿದೆ.
ಅರಸೀಕೆರೆ ಮೂಲದ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಎ. ಜಯಶ್ರೀ ಎಂಬುವವರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ ಮಾಡಿದ್ದ ಹಾರವನ್ನು ತಯಾರಿಸಿ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಫ್ರೀ ಟಿಕೆಟ್ ಹಾರ ಹಾಕಿದ್ದಾರೆ.
ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸುತ್ತಾ ಜಯಶ್ರೀ ಅವರು, ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲಾ ಫ್ರೀ ಟಿಕೆಟ್‌ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ ಎಂದಿದ್ದಾರೆ.
ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯತೆ ಅರ್ಪಿಸಿ ಆಶೀರ್ವಾದ ಪಡೆದಕೊಂಡರು.