ಪೀಣ್ಯ ಫ್ಲೈ ಓವರ್ ಸಂಚಾರ ನಿರ್ಬಂಧ - ರಾತ್ರಿ 10ರಿಂದ ಬೆಳಗ್ಗೆ 5 ಗಂಟೆವರೆಗೆ ಸಂಚಾರವಿಲ್ಲ

Published : Aug 04, 2026, 06:55 AM IST
Peenya

ಸಾರಾಂಶ

ಡಾಂಬರೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಪೀಣ್ಯ ಮೇಲ್ಸೇತುವೆ ಮೇಲೆ ಆ.3 ರಿಂದ 12 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

  ಬೆಂಗಳೂರು :  ಡಾಂಬರೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಪೀಣ್ಯ ಮೇಲ್ಸೇತುವೆ ಮೇಲೆ ಆ.3 ರಿಂದ 12 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಫೈಓವರ್ (ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಮೇಲೆ ಡಾಂಬರೀಕರಣ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಳ್ಳಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಆ.3 ರಿಂದ 12 ರವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಹಾಗೂ ಶನಿವಾರ ಮತ್ತು ಭಾನುವಾರ ರಾತ್ರಿ 12 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ತುಮಕೂರು ಕಡೆಗೆ ಹೋಗುವ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಂಚಾರಿ ಪೊಲಿಸರು ತಿಳಿಸಿದ್ದಾರೆ.

ಸಂಚಾರ ನಿರ್ಬಂಧ: 

ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಎಸ್.ಆರ್.ಎಸ್ ಅಪ್ಪರ್‌ ರ್ಯಾಂಪ್‌ನಿಂದ ಕೆನ್ನಮೆಟಲ್ ವಿಡಿಯಾ ಡೌನ್‌ ರ್ಯಾಂಪ್‌ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ: 

 ನಗರದಿಂದ ನೆಲಮಂಗಲ ಕಡೆಗೆ ಸಂಚರಿಸುವ ವಾಹನಗಳು ಎಸ್.ಆರ್.ಎಸ್ ಅಪ್ಪರ್‌ ರ್ಯಾಂಪರ್‌ ಪ್ಲೈ ಓವ‌ರ್ ಕೆಳಭಾಗದ ಎನ್.ಹೆಚ್-4 ರಸ್ತೆ ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್.ಆರ್.ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ ಜಂಕ್ಷನ್, 8ನೇ ಮೈಲಿ ಜಂಕ್ಷನ್, ಪಾರ್ಲೆ-ಜಿ ಟೋಲ್ ಮೂಲಕ ಸಂಚರಿಸಬಹುದಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಬೆಂಗಳೂರಲ್ಲಿ ಪಂಚ ಹೋಳಾದ ಪೊಲೀಸ್ ಕಮೀಷನರೇಟ್‌
ಯುವಜನತೆ ಡ್ರಗ್ಸ್‌ನಿಂದ ದೂರ ಇರಿ : ರಾಜ್ಯಪಾಲ