ಮಾಣಿಕ್ ಷಾ ಪರೇಡ್ ಮೈದಾನದ ಸುತ್ತ ಸಂಚಾರ ಮಾರ್ಗ ಬದಲಾವಣೆ

Published : Aug 15, 2026, 07:24 AM IST
Independence Day

ಸಾರಾಂಶ

ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪರೇಡ್ ನಡೆಯುವುದರಿಂದ ಮೈದಾನದ ಸುತ್ತಮುತ್ತ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಬೆಂಗಳೂರು : ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪರೇಡ್ ನಡೆಯುವುದರಿಂದ ಮೈದಾನದ ಸುತ್ತಮುತ್ತ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ, ಕಬ್ಬನ್‌ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ವರೆಗೆ ಹಾಗೂ ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಮಾಣಿಕ್‌ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ. ಸಾರ್ವಜನಿಕರು ಯಾವುದೇ ನೆರವಿಗಾಗಿ ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಬಹುದು. ಅಥವಾ 112ಗೆ ಕರೆ ಮಾಡಬಹುದು.

ಯಾವ ವಾಹನ, ಎಲ್ಲಿ ಪ್ರವೇಶ?:

ಬೆಳಿಗ್ಗೆ 9ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರ ಪಾಸ್‌ಗಳಲ್ಲಿ ನಿಗಧಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಂಡು, ನಿಗಧಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ. ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆಎಸ್ಆರ್ಪಿ, ಕ್ಯೂಆರ್ಟಿ, ಬಿಬಿಎಂಪಿ ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ 2ರ ಮೂಲಕ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದು. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ 4ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದು.

ಕಾರ್ಯಕ್ರಮಕ್ಕೆ ಆಗಮಿಸುವವರು ಗಮನಿಸಿ

ಸಮಾರಂಭಕ್ಕೆ ಆಗಮಿಸುವವರು ಬೆಳಿಗ್ಗೆ 8.30ರ ಒಳಗಾಗಿ ತಮ್ಮ ಆಸನಗಳಲ್ಲಿ ಆಸೀನರಾಗತಕ್ಕದ್ದು. ಯಾವುದೇ ಕಾರಣಕ್ಕೂ ತಡವಾಗಿ ಪ್ರವೇಶಿಸುವಂತಿಲ್ಲ. ಸಮಾರಂಭಕ್ಕೆ ಆಗಮಿಸುವ ಸಾರ್ವಜನಿಕರು ಮಣಿಪಾಲ್ ಸೆಂಟರ್ ಕಡೆಯಿಂದ ಕಬ್ಬನ್ ರಸ್ತೆ ಮೂಲಕ ಗೇಟ್ ನಂ4ಕ್ಕೆ ಆಗಮಿಸಲು ಸೂಚನೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ತಮ್ಮೊಂದಿಗೆ ಅನಗತ್ಯ ಲಗೇಜು ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ. ಯಾವುದಾದರೂ ಅನುಮಾನಾಸ್ಪದ ವಸ್ತುಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸಮವಸ್ತ್ರದ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.

ನಿಷೇಧಿತ ವಸ್ತುಗಳು

ಭದ್ರತೆಯ ದೃಷ್ಟಿಯಿಂದ ಮೈದಾನಕ್ಕೆ ಆಗಮಿಸುವವರು ಗೇಟ್‌ಗಳ ಬಳಿ ತಪಾಸಣೆಗೆ ಸಹಕರಿಸುವುದು ಕಡ್ಡಾಯ ಹಾಗೂ ಕೆಳಕಂಡ ವಸ್ತುಗಳನ್ನು ಮೈದಾನದೊಳಗೆ ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಗರೇಟ್ ಮತ್ತು ಬೆಂಕಿ ಪೆಟ್ಟಿಗೆ, ಚೂಪಾದ, ಹರಿತ ವಸ್ತುಗಳು ಹಾಗೂ ಚಾಕು-ಚೂರಿಗಳು, ಕರಪತ್ರಗಳು, ಕಪ್ಪುಕರವಸ್ತ್ರಗಳು, ಬಣ್ಣದ ದ್ರಾವಣಗಳು, ತಿಂಡಿ-ತಿನಿಸುಗಳು, ವೀಡಿಯೋ ಮತ್ತು ಸ್ಟಿಲ್ ಕ್ಯಾಮರಾಗಳು, ​ಮದ್ಯದ ಬಾಟಲಿಗಳು, ಮಾದಕ ವಸ್ತುಗಳು, ನೀರಿನ ಬಾಟಲಿಗಳು ಹಾಗೂ ಕ್ಯಾನ್‌ಗಳು, ಪಟಾಕಿ ಮತ್ತು ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಇನ್ನು ವಾರದೊಳಗೆ ಕೆಪಿಎಸ್‌ಸಿ ನೇಮಕ ಪರೀಕ್ಷೆ ಫಲಿತಾಂಶ?
ದೇಶ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಪ್ರಮುಖ