ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ

Published : Mar 10, 2026, 09:14 AM IST
HD Devegowda

ಸಾರಾಂಶ

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಿಸದೆ ಹರಿಸಲಾಗುತ್ತಿದೆ. ಪರಿಣಾಮವಾಗಿ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು, ತರಕಾರಿ ವಿಷಕಾರಿಯಾಗುತ್ತಿವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ನವದೆಹಲಿ :  ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಿಸದೆ ಹರಿಸಲಾಗುತ್ತಿದೆ. ಪರಿಣಾಮವಾಗಿ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು, ತರಕಾರಿ ವಿಷಕಾರಿಯಾಗುತ್ತಿವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಯೋಜನೆಗಳ ವಿಳಂಬಕ್ಕೆ ರಾಜ್ಯ ಸರಕಾರವೇ ಕಾರಣ

ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದೇವೇಗೌಡ, ಎತ್ತಿನಹೊಳೆ, ಮೇಕೆದಾಟು ಯೋಜನೆಗಳ ವಿಳಂಬಕ್ಕೆ ರಾಜ್ಯ ಸರಕಾರವೇ ಕಾರಣ ಎಂದರು.

ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸಬೇಕು

ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸಬೇಕು. ಶುದ್ಧೀಕರಿಸದೆ ಮಲಿನ ನೀರನ್ನು ಹರಿಸಲಾಗುತ್ತಿದೆ. ಆ ನೀರು ಮಾನವ ಬಳಕೆಗೆ ಯೋಗ್ಯವಲ್ಲ. ಜನರ ಜೀವದ ಜತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಈ ಜಿಲ್ಲೆಗಳು ಎದುರಿಸುತ್ತಿರುವ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಅರಣ್ಯ, ಪರಿಸರ ಜೀವಿಶಾಸ್ತ್ರ ಖಾತೆ ಮಂತ್ರಿಗಳಾದ ಭೂಪೇಂದ್ರ ಯಾದವ್‌ ಮಧ್ಯ ಪ್ರವೇಶಿಸಬೇಕು. ಇಲ್ಲವಾದರೆ ಈ ಜಿಲ್ಲೆಯ ಜನರು ವಿಪರೀತ ಬೆಲೆ ತೆರಲಿದ್ದಾರೆ ಎಂದು ದೂರಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಮತದಾರರ ಕರಡುಪಟ್ಟಿ ಪ್ರಕಟ ಗ್ರೇಟರ್‌ ಬೆಂಗಳೂರಲ್ಲಿ 89 ಲಕ್ಷ ಮತದಾರರು
ಬೆಂಗಳೂರಿನ ಅರ್ಧದಷ್ಟು ಕಸ ಮರುಬಳಕೆ: ಜಿಬಿಎ-ರಾಜ್ಯ ನಿರ್ವಹಣೆಯಲ್ಲಿ ಶೀಘ್ರ ಭಾರಿ ಬದಲಾವಣೆ