ಪಶುವೈದ್ಯ ನೇಮಕಕ್ಕೆ ತಡೆ, ತನಿಖೆಗಾಗಿ ಸಮಿತಿ ರಚನೆ

Published : Jul 27, 2026, 05:18 AM IST
KPSC Scam

ಸಾರಾಂಶ

ಪಶು ವೈದ್ಯಾಧಿಕಾರಿಗಳ 400 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ಆರೋಪ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದ್ದು, ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ನಾಲ್ವರು ಸದಸ್ಯರನ್ನೊಳಗೊಂಡ ಉಪಸಮಿತಿ

  ಬೆಂಗಳೂರು :  ಪಶು ವೈದ್ಯಾಧಿಕಾರಿಗಳ 400 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮದ ಆರೋಪ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದ್ದು, ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ನಾಲ್ವರು ಸದಸ್ಯರನ್ನೊಳಗೊಂಡ ಉಪಸಮಿತಿ ರಚಿಸಿ ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಜ್ಯೋತಿ ಭಾನುವಾರ ಆದೇಶ ಹೊರಡಿಸಿದ್ದಾರೆ.

ಕೆಪಿಎಸ್‌ಸಿ ಹಿರಿಯ ಸದಸ್ಯರಾದ ಶಕುಂತಲಾ ಎಸ್ ದುಂಡಿಗೌಡರ್ ಅವರ ಅಧ್ಯಕ್ಷತೆಯ ವಿಚಾರಣಾ ಸಮಿತಿಯಲ್ಲಿ ಎಂ.ವಿ.ರಾಮಕೃಷ್ಣ ಪ್ರಸಾದ್, ಶಿವನಗೌಡ ಮತ್ತು ಎಲ್ಪ್ರಿಡಾ ಡಿಸಿಲ್ವಾ ಅವರನ್ನು ಸದಸ್ಯರಾಗಿ ನೇಮಿಸಲಾಗಿದೆ.

ನೇಮಕಾತಿ ಪರೀಕ್ಷೆಯ ಪ್ರತಿ ಹಂತವನ್ನು ಮತ್ತು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಒಂದು ವಾರದೊಳಗೆ ವಾಸ್ತವಾಂಶಗಳ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು. ಇದಕ್ಕಾಗಿ ಉಪ ಸಮಿತಿಗೆ ಅಗತ್ಯವಾದ ಮಾಹಿತಿ ಒದಗಿಸಲು ಕಾರ್ಯದರ್ಶಿಯವರನ್ನು ಹಾಗೂ ಕಾನೂನು ಮಾಹಿತಿ ಒದಗಿಸಲು ಕಾನೂನು ಕೋಶದ ಮುಖ್ಯಸ್ಥರನ್ನು ಸಮನ್ವಯ ಅಧಿಕಾರಿಗಳಾಗಿ ನೇಮಿಸಲಾಗಿದೆ.

ಆಂತರಿಕ ವಿಚಾರಣಾ ಉಪಸಮಿತಿ ವರದಿ ಸಲ್ಲಿಸುವವರೆಗೆ ಜು.17ರಂದು ಹೊರಡಿಸಲಾಗಿದ್ದ ಪಶುವೈದ್ಯಾಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿ ತಡೆ ಹಿಡಿಯಲು ಆಯೋಗದ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸ ಕಾಪಾಡಲು ಬದ್ಧವಾಗಿದ್ದು, ವಿಚಾರಣಾ ವರದಿ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

400 ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ

400 ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪಶುವೈದ್ಯ ಡಾ.ಮಂಜುನಾಥ ಎಂಬವರು ನೀಡಿದ ದೂರು ಆಧರಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿರುವ 21 ಜನರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಅನುಮಾನವಿದೆ. ಕೆಪಿಎಸ್ಸಿಯಿಂದ ಅಮಾನತುಗೊಂಡಿರುವ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತಿತರರನ್ನು ಆರೋಪಿಗಳೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ನೇಮಕಾತಿಯ ಕುರಿತಾದ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಸಾಮಾಜಿಕ ಬದ್ಧತೆ, ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಆಯೋಗವು ವಿಚಾರಣಾ ಸಮಿತಿ ರಚಿಸಿದೆ.

- ಕೆ. ಜ್ಯೋತಿ, ಕಾರ್ಯದರ್ಶಿ, ಕೆಪಿಎಸ್‌ಸಿ

400 ಪಶುವೈದ್ಯರ ನೇಮಕಕ್ಕಾಗಿ ಇತ್ತೀಚೆಗೆ ಪರೀಕ್ಷೆ ನಡೆಸಿ ಅಂತಿಮ ಪಟ್ಟಿ ಪ್ರಕಟಿಸಿದ್ದ ಕೆಪಿಎಸ್‌ಸಿ

ಆದರೆ ಪಶುವೈದ್ಯ ಪದವಿಯಲ್ಲಿ ಕಡಿಮೆ ಅಂಕ ಪಡೆದವರಿಗೆ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಂಕ

ಇದರಲ್ಲಿ ಅಕ್ರಮ ನಡೆದಿದೆ ಎಂದು ದೂರು. ಇದನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಿದ್ದ ಪೊಲೀಸರು

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ದೊಡ್ಡಬಳ್ಳಾಪುರದ ವಿವಿಧೆಡೆ ಆಷಾಢ ಏಕಾದಶಿ ವ್ರತಾಚರಣೆ
ಕೆ.ಆರ್.ಪುರ- ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗಿನ ಹೊರವರ್ತುಲ ರಸ್ತೆಗೆ ₹450 ಕೋಟಿ : ಕೃಷ್ಣ ಬೈರೇಗೌಡ