ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದ ಲಕ್ಕುಂಡಿ ಸ್ತಬ್ಧ ಚಿತ್ರಕ್ಕೆ ಓಟ್‌ ಮಾಡಿ ಬೆಂಬಲಿಸಿ

Published : Jan 28, 2025, 10:05 AM IST
Republic Day Parade

ಸಾರಾಂಶ

ದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಈ ಬಾರಿ ಭಾಗವಹಿಸಿದ್ದ ಕರ್ನಾಟಕದ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರಕ್ಕೆ ಓಟ್‌ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ಎಂ.ನಿಂಬಾಳ್ಕರ್‌ ಮನವಿ ಮಾಡಿದ್ದಾರೆ.

 ಬೆಂಗಳೂರು : ದೆಹಲಿಯಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಈ ಬಾರಿ ಭಾಗವಹಿಸಿದ್ದ ಕರ್ನಾಟಕದ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರಕ್ಕೆ ಓಟ್‌ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ಎಂ.ನಿಂಬಾಳ್ಕರ್‌ ಮನವಿ ಮಾಡಿದ್ದಾರೆ.

ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ ಆನ್‌ಲೈನ್‌ನಲ್ಲಿ ಓಟ್‌ ಮಾಡಲು ಅವಕಾಶ ಕಲ್ಪಿಸಿದೆ.

ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಜ.28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸಬಹುದು.

ಓಟ್ ಮಾಡಲು ವೆಬ್‌ಸೈಟ್‌: https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಬೇಕು. ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು. ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಪ್‌ ಮಾಡಿ 77382 99899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ