6 ಪತ್ರಕರ್ತರಿಗೆ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ ಪ್ರಕಟ

Published : Jun 22, 2025, 08:15 AM IST
Ravi Hegde

ಸಾರಾಂಶ

‘ವಿಶ್ವ ಸಂವಾದ ಕೇಂದ್ರ, ಕರ್ನಾಟಕ’ದಿಂದ ನೀಡಲಾಗುವ ವಾರ್ಷಿಕ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ-2025ಕ್ಕೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಭಾಜನರಾಗಿದ್ದಾರೆ.

 ಬೆಂಗಳೂರು : ರಾಜ್ಯದ ಸುದ್ದಿ ಸಂವಹನ ಸಂಸ್ಥೆಯಾಗಿರುವ ‘ವಿಶ್ವ ಸಂವಾದ ಕೇಂದ್ರ, ಕರ್ನಾಟಕ’ದಿಂದ ನೀಡಲಾಗುವ ವಾರ್ಷಿಕ ವಿಎಸ್‌ಕೆ ಮಾಧ್ಯಮ ಪ್ರಶಸ್ತಿ-2025ಕ್ಕೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಭಾಜನರಾಗಿದ್ದಾರೆ.

ಜೂ.29ರಂದು ನಗರದ ಬಸವನಗುಡಿಯಲ್ಲಿರುವ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರವಿ ಹೆಗಡೆ ಅವರಿಗೆ ‘ತಿ.ತಾ.ಶರ್ಮ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಇದೇ ವೇಳೆ ಸುಧರ್ಮಾ ಪತ್ರಿಕೆಯ ಕೆ.ಎಸ್. ಜಯಲಕ್ಷ್ಮೀ ಅವರಿಗೆ ಬೆ.ಸು.ನಾ ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ, ಎಂ.ವಿ.ಕಾಮತ್ ಪತ್ರಿಕೋದ್ಯಮ ಪ್ರಶಸ್ತಿಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ರಾಮು ಪಾಟೀಲ್, ಚಂದ್ರಶೇಖರ್ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿಗೆ ನ್ಯೂಸ್ 18 ಕನ್ನಡದ ಎ. ಹರಿಪ್ರಸಾದ್, ಹೊ.ವೆ.ಶೇಷಾದ್ರಿ ಅಂಕಣಕಾರ ಪ್ರಶಸ್ತಿಗೆ ಹೊಸದಿಗಂತ, ಉತ್ಥಾನದ ರಾಧಾಕೃಷ್ಣ ಕಲ್ಚಾರ್ ಹಾಗೂ ವಿ.ಎಸ್.ಕೆ ಡಿಜಿಟಲ್ ಮೀಡಿಯಾ ಪ್ರಶಸ್ತಿಯನ್ನು ಟಿವಿ ವಿಕ್ರಮದ ಕು.ಮುಮ್ತಾಸ್ ಅಬ್ದುಲ್ ನೆಲ್ಯಡ್ಕ ಅವರಿಗೆ ಪ್ರದಾನ ಮಾಡಲಾಗುವುದು.

ಆರ್‌ಎಸ್‌ಎಸ್‌ ಅಖಿಲ ಭಾರತೀಯ ಸಹಬೌದ್ಧಿಕ್ ಪ್ರಮುಖ ಸುಧೀರ್, ವಿಶ್ವ ಸಂವಾದ ಕೇಂದ್ರದ ಅಧ್ಯಕ್ಷ ಡಾ.ವಿ. ಶ್ರೀಧರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

PREV
Read more Articles on

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ