ಬಾಹ್ಯಶಕ್ತಿಗಳ ವಿರುದ್ಧ ನಾವೆಲ್ಲ ಒಗ್ಗಟ್ಟಿನಿಂದ ಇರಬೇಕು : ಎಚ್‌ಡಿಡಿ

ಸಾರಾಂಶ

ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ಕಳವಳಕಾರಿಯಾಗಿದ್ದು, ಬಾಹ್ಯ ಶಕ್ತಿಗಳು ನಮ್ಮನ್ನು ಕೆರಳಿಸಿದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಇರುವುದು ಬಹಳ ಮುಖ್ಯ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಬೆಂಗಳೂರು: ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ಕಳವಳಕಾರಿಯಾಗಿದ್ದು, ಬಾಹ್ಯ ಶಕ್ತಿಗಳು ನಮ್ಮನ್ನು ಕೆರಳಿಸಿದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಇರುವುದು ಬಹಳ ಮುಖ್ಯ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

 ಈ ದುರಂತವನ್ನು ಬುದ್ಧಿವಂತ ಮತ್ತು ಕಾರ್ಯತಂತ್ರದ ರೀತಿಯಲ್ಲಿ ನಿಭಾಯಿಸುತ್ತಿರುವ ಕೇಂದ್ರ ಸರ್ಕಾರದ ಜೊತೆ ನಾನು ಮತ್ತು ನನ್ನ ಪಕ್ಷ ನಿಲ್ಲುತ್ತೇವೆ ಎಂದಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಘಟನೆ ತುಂಬಾ ನೋಯಿಸಿದ್ದು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರ ಕುಟುಂಬಗಳು ಮತ್ತು ಸ್ನೇಹಿತರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Share this article