ಬೆಂಗಳೂರು ಅರಮನೆ ಟಿಡಿಆರ್‌ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ

KannadaprabhaNewsNetwork |  
Published : May 28, 2025, 12:31 AM IST

ಸಾರಾಂಶ

ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಿಸಿದ ₹3,400 ಕೋಟಿ ಟಿಡಿಆರ್‌ ಹಸ್ತಾಂತರ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠಕ್ಕೆ ವರ್ಗಾಯಿಸಿದೆ.

ನವದೆಹಲಿ: ಬಳ್ಳಾರಿ ಮತ್ತು ಜಯಮಹಲ್ ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರು ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಸಂಬಂಧಿಸಿದ ₹3,400 ಕೋಟಿ ಟಿಡಿಆರ್‌ ಹಸ್ತಾಂತರ ಪ್ರಕರಣವನ್ನು ಸುಪ್ರೀಂಕೋರ್ಟ್‌ ಸಿಜೆಐ ಪೀಠಕ್ಕೆ ವರ್ಗಾಯಿಸಿದೆ.

ನ್ಯಾ.ಸೂರ್ಯಕಾಂತ್ ನೇತೃತ್ವದ ಪೀಠ ಮಂಗಳವಾರ ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕಳೆದ ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ.ಅರವಿಂದ ಕುಮಾರ್ ನೇತೃತ್ವದ ಪೀಠ, ₹3,400 ಕೋಟಿ ಟಿಡಿಆರ್‌ (ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು) ಹಣವನ್ನು ಮೈಸೂರು ರಾಜವಂಸಸ್ಥರಿಗೆ ನೀಡುವಂತೆ ತೀರ್ಪು ನೀಡಿತ್ತು. ಕರ್ನಾಟಕ ಸರ್ಕಾರ ಈ ತೀರ್ಪು ಪ್ರಶ್ನಿಸಿ, ಮೇಲ್ಮನವಿ ಸಲ್ಲಿಸಿತ್ತು.

ಕೋ-ಆರ್ಡಿನೇಷನ್ ಪೀಠ ನೀಡಿದ ತೀರ್ಪನ್ನು ಪರಿಶೀಲನೆ ಮಾಡಲು ಈ ಪೀಠಕ್ಕೆ ಅವಕಾಶ ಇಲ್ಲ. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಪೀಠ ಅಥವಾ ಇತರ ಪರಿಹಾರಗಳನ್ನು ಅರ್ಜಿದಾರರು ಬಯಸುವುದಾದರೆ ಮತ್ತೆ ಸಿಜೆಐ (ಮುಖ್ಯ ನ್ಯಾಯಮೂರ್ತಿ) ಪೀಠದ ಮುಂದೆ ಹೋಗಬಹುದು ಎಂದು ಸೂಚನೆ ನೀಡಿತು.ರಾಜ್ಯ ಸರ್ಕಾರದ ಪರವಾಗಿ ಕಪಿಲ್ ಸಿಬಲ್, ರಾಜಮನೆತನದ ಪರವಾಗಿ ಮುಕುಲ್ ರೋಹಟಗಿ ವಾದ ಮಂಡಿಸಿದರು. ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೂಡ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ