ಕನ್ನಡಪ್ರಭ ವಾರ್ತೆ ಹೊಸಕೋಟೆ
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರಣ್ಯ ಇಲಾಖೆ, ಜಿಲ್ಲಾ ಕಾನೂನು ಸಭೆಗಳ ಪ್ರಾಧಿಕಾರ, ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಳೆಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಪರಿಸರದ ಮೇಲೆ ಮನುಷ್ಯ ನಿರಂತರ ದೌರ್ಜನ್ಯ ಮಾಡುತ್ತಿರುವ ಪರಿಣಾಮವಾಗಿ, ಪರಿಸರ ಅವಸಾನದ ಹಂಚಿಗೆ ತಲುಪುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.೧೦ಸಾವಿರ ಗಿಡ ನೆಡುವ ಗುರಿ: ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 10 ಸಾವಿರ ಗಿಡ ನೆಡುವ ಗುರಿ ಹೊಂದಲಾಗಿದೆ. ಅರಣ್ಯ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು, ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗಿಡಗಳನ್ನು ನೆಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್ ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ವೆಂಕಟಸ್ವಾಮಿ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಸತೀಶ್ ಬಿ, ಪ್ರಾಂಶುಪಾಲ ಮುನಿನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ, ಉಪ ವಲಯ ಅರಣ್ಯ ಅಧಿಕಾರಿ ಮೇಘ, ಸಹಾಯಕ ಸರ್ಕಾರಿ ಅಭಿಯೋಜಕ ಅಶೋಕ್ ಕುಮಾರ್, ವಕೀಲರ ಸಂಘದ ಉಪಾಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಜಂಟಿ ಕಾರ್ಯದರ್ಶಿ ಮುನಿರಾಜ್, ಖಜಾಂಚಿ ರವಿಕುಮಾರ್ ಹಾಜರಿದ್ದರು.