ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ದೇವನಹಳ್ಳಿ ತಾಲೂಕಿನಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ 45 ಸಾವಿರ ಎಂಎಸ್‌ಎಂಇ ಘಟಕಗಳು ನೋಂದಣಿಯಾಗಿದ್ದು, ಅಂದಾಜು ನಾಲ್ಕು ಲಕ್ಷ ಜನರಿಗೆ ಉದ್ಯೋಗಾವಕಾಶ ಒದಗಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯರಹಿತ ಯುವಕರನ್ನು ಒಳಗೊಂಡಂತೆ ಗಮನಾರ್ಹ ಕಾರ್ಯಪಡೆಯನ್ನು ಹೊಂದಿದೆ. ಅವರು ಬೇಡಿಕೆ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಮೂಲಕ ಈ ಉದ್ಯಮಗಳಲ್ಲಿ ಪರಿಣಾಮಕಾರಿಯಾಗಿ ಉದ್ಯೋಗ ಮಾಡಬಹುದು. ಅಂತಹ ತರಬೇತಿಯನ್ನು ನೀಡುವ ಮೂಲಕ ನಾವು ಉದ್ಯಮದ ಅವಶ್ಯಕತೆಗಳು ಮತ್ತು ಲಭ್ಯವಿರುವ ಮಾನವ ಸಂಪನ್ಮೂಲಗಳ ನಡುವಿನ ಅಂತರವನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲೂಕಿಗೆ ಎನ್‌ಎಸ್‌ಐಸಿ ತಾಂತ್ರಿಕ ಸೇವಾ ಕೇಂದ್ರ, ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ವಿನಂತಿಸಲಾಗಿದೆ. ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯವಿರುವ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದು, ಹಿಂದಿನ ಸಭೆಯಲ್ಲಿ ಚರ್ಚಿಸಿದಂತೆ, ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಅನುಕೂಲವಾಗುವಂತೆ ಈ ಯೋಜನೆಗೆ ಶೀಘ್ರವೇ ಮಂಜೂರಾತಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.ವೇಮಗಲ್‌ನಲ್ಲಿ ತಾಂತ್ರಿಕ ತರಬೇತಿ ಕೇಂದ್ರ:
ತಾವು ಎಂಎಸ್‌ಎಂಇ ಸಚಿವರಾಗಿದ್ದ ಅವಧಿಯಲ್ಲಿ ಈ ತಾಂತ್ರಿಕ ತರಬೇತಿ ಕೇಂದ್ರ ಮಂಜೂರಾಗಿದೆ. ಆದರೆ, ಹಣ ಬಿಡುಗಡೆಯಾಗದ ಕಾರಣ ಯೋಜನೆ ಇನ್ನೂ ಆರಂಭವಾಗಿಲ್ಲ. ಕೇಂದ್ರ ಸ್ಥಾಪನೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಗತ್ಯವಿರುವ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡಲು, ಹಿಂದುಳಿದ ಪ್ರದೇಶದಲ್ಲಿ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ಉತ್ತೇಜಿಸಲು ಪತ್ರದಲ್ಲಿ ಕೋರಿದ್ದಾರೆ.