ಬೆಂಗಳೂರು ಕಾಲ್ತುಳಿತ: ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

KannadaprabhaNewsNetwork |  
Published : Jun 07, 2025, 12:32 AM IST
6ಕೆಆರ್ ಎಂಎನ್ 5.ಜೆಪಿಜಿರಾಮನಗರದ ಐಜೂರು ವೃತ್ತದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು

ಕನ್ನಡಪ್ರಭ ವಾರ್ತೆ ರಾಮನಗರ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಜನ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಸರ್ಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್‌ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಬಿಜೆಪಿ ಮುಖಂಡ ಟಿ.ಕೆ. ಶಾಂತಪ್ಪ ಮಾತನಾಡಿ, ತಪ್ಪು ಮಾಡಿದ್ದು ಸರ್ಕಾರ, ಶಿಕ್ಷೆಗೆ ಗುರಿಯಾಗಿದ್ದು ಅಧಿಕಾರಿಗಳು. ದಕ್ಷ ಪೊಲೀಸ್ ಆಯುಕ್ತ ದಯಾನಂದ್ ಅವರೂ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ಜನತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಕೆಟ್ಟ ಸಂದೇಶ ನೀಡಿದೆ ಎಂದರು.

ದಯಾನಂದ್ ಅವರು ಹೊಸ ವರ್ಷದ ಆಚರಣೆ, ಕ್ರಿಕೆಟ್ ಪಂದ್ಯಗಳು ಸೇರಿದಂತೆ ಅನೇಕ ಸಂದರ್ಭಗಳಲ್ಲಿ ಅವರೇ ನಗರದ ಪೊಲೀಸ್ ಕಮೀಷನರ್ ಅಗಿದ್ದರು. ಹೊಸ ವರ್ಷದ ಹಿಂದಿನ ಮಹಾತ್ಮಾ ಗಾಂಧಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಲಕ್ಷಾಂತರ ಜನ ಸೇರಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ವ್ಯವಸ್ಥೆ ಮಾಡಿದ್ದರು. ಅಂಥ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ ಇವರು ಯಾವ ರೀತಿಯ ಸಂದೇಶ ನೀಡಿದ್ದಾರೆ ಎಂದು ಪ್ರಶ್ನಿಸಿದರು.ಕಾಂಗ್ರೆಸ್ ಹೈಕಮಾಂಡ್ ಎನ್ನುವುದು ಇದ್ದರೆ, ಅದಕ್ಕೆ ಸಂಕೋಚ ನಾಚಿಕೆ ಎನ್ನುವುದು ಇದ್ದರೆ ಮೊದಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ತೆಗೆದು ಅವರ ಜಾಗಕ್ಕೆ ಸಭ್ಯರನ್ನು ತರಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್. ಆನಂದಸ್ವಾಮಿ, ಬಿಜೆಪಿ ಮುಖಂಡರಾದ ಆರ್‌.ವಿ. ಸುರೇಶ್, ನಾಗೇಶ್, ರುದ್ರದೇವರು, ಪಿ. ಶಿವಾನಂದ, ವಿ.ರಾಜು, ಕಾಳಯ್ಯ, ಜೆಡಿಎಸ್ ಮುಖಂಡರಾದ ಜಯಕುಮಾರ್, ಕೆಂಪರಾಜು, ಅಂಜನಾಪುರ ವಾಸು ಮತ್ತಿತರರು ಭಾಗವಹಿಸಿದ್ದರು.

----

6ಕೆಆರ್ ಎಂಎನ್ 5.ಜೆಪಿಜಿ

ರಾಮನಗರದ ಐಜೂರು ವೃತ್ತದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ