-ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ವಿದ್ಯಾರ್ಥಿನಿ ಶ್ರದ್ಧಾ । ಸಿಆರ್‌ಪಿ ಮಹೇಶ್ ಭೇಟಿ
ಕನ್ನಡಪ್ರಭ ವಾರ್ತೆ ಶಿಕಾರಿಪುರ
ತಾಲೂಕಿನ ಬಿಳಿಕಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಗಾಯಗೊಂಡ ಕಣಸೋಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶ್ರದ್ಧಾರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶಪ್ಪ ಕೆ.ಬಿ ಭಾನುವಾರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ರಜಾ ದಿನವಾಗಿದ್ದರೂ ಆಸ್ಪತ್ರೆಗೆ ತೆರಳಿದ ಬಿಇಒ ಲೋಕೇಶಪ್ಪ, ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಕ್ರೀಡಾಕೂಟದ ವೇಳೆ ವಿದ್ಯಾರ್ಥಿನಿಯ ಬಲಗೈ ಮೂಳೆ ಮುರಿತಕ್ಕೊಳಗಾಗಿತ್ತು.ವಿದ್ಯಾರ್ಥಿನಿ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದ ಬಿಇಒ ಗಾಯದ ಕಾರಣದಿಂದ ಆಕೆಯ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸಹಕಾರ ನೀಡುವುದಾಗಿ ಪೋಷಕರಿಗೆ ಭರವಸೆ ನೀಡಿದರು.
ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಫೋಟೋ
[ಫೋಟೋ ಫೈಲ್ ನಂ.9 ಕೆ.ಎಸ್.ಕೆ.ಪಿ 2]