ನಸುಕಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ಬಿಇಒ ಭೇಟಿ

KannadaprabhaNewsNetwork |  
Published : Dec 21, 2025, 03:00 AM IST
20ಎಸ್.ಎನ್.ಡಿ.02,03ಸಂಡೂರು ಪುರಸಭೆ ವ್ಯಾಪ್ತಿಯ ಲಕ್ಷ್ಮೀಪುರದಲ್ಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗಳಿಗೆ ಶನಿವಾರ ನಸುಕಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ ಮತ್ತವರ ತಂಡದ ಸದಸ್ಯರು ಭೇಟಿ ನೀಡಿ ಮಾರ್ಗದರ್ಶನ ಮಾಡಿದರು. | Kannada Prabha

ಸಾರಾಂಶ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ವಿಭಿನ್ನ ಪ್ರಯತ್ನಗಳು ತಾಲೂಕಿನಲ್ಲಿ ನಡೆದಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ ಮತ್ತವರ ತಂಡದ ಸದಸ್ಯರು ಶನಿವಾರ ನುಸಕಿನಲ್ಲಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ಮಾರ್ಗದರ್ಶನ ಮಾಡಿದರು.

ಸಂಡೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ವಿಭಿನ್ನ ಪ್ರಯತ್ನಗಳು ತಾಲೂಕಿನಲ್ಲಿ ನಡೆದಿದ್ದು, ಅದರ ಅಂಗವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ ಮತ್ತವರ ತಂಡದ ಸದಸ್ಯರು ಶನಿವಾರ ನುಸಕಿನಲ್ಲಿ 5ಕ್ಕೆ ಕೊರೆಯುವ ಚಳಿಯ ನಡುವೆ ಸಂಡೂರು ಪುರಸಭೆ ವ್ಯಾಪ್ತಿಯಲ್ಲಿನ ಲಕ್ಷ್ಮೀಪುರದಲ್ಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ವಿದ್ಯಾರ್ಥಿಗಳಿದೆ ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ಕ್ಷೇತ್ರ ಸಮನ್ವಯಾಧಿಕಾರಿ ಶರಣಬಸಪ್ಪ ಕರಿಶೆಟ್ಟಿ ಮತ್ತಿತರ ಶಿಕ್ಷಕರು, ವಿದ್ಯಾರ್ಥಿಗಳ ಅಧ್ಯಯನ ಕ್ರಮ, ಉತ್ತಮ ಫಲಿತಾಂಶ ಪಡೆಯಲು ಕೈಗೊಳ್ಳಬೇಕಾದ ಕ್ರಮಗಳು, ಪಾಲಕರ ಪಾತ್ರ ಕುರಿತು ವಿವರಿಸಿದರು. ಅಲ್ಲದೆ, ಮಾರ್ಗದರ್ಶನ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಅವರ ತಂಡದ ಸದಸ್ಯರು ನಸುಕಿನಲ್ಲಿಯೇ ತಮ್ಮ ಮನೆಗಳಿಗೆ ಭೇಟಿ ನೀಡಿದ್ದು, ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪಾಲಕರಿಗೆ ಅಚ್ಚರಿಯ ಜೊತೆಗೆ ಸಂತಸವನ್ನುಂಟು ಮಾಡಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರ ಈ ಕಾರ್ಯಕ್ಕೆ ಪೋಷಕರಿಂದ ಮೆಚ್ಚುಗೆ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಗೋಳಪ್ಪ, ಶಿಕ್ಷಕರಾದ ಕಲ್ಲಯ್ಯಮಠ, ಮೆಹಬೂಬ್‌ಬಾಷ, ಷಣ್ಮುಖರಾವ್, ಪುರುಷೋತ್ತಮ್, ನಿವೃತ್ತ ಶಿಕ್ಷಕ ದೇವರಮನೆ ನಾಗಪ್ಪ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''