ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಬಿಇಎಸ್‌ ಹೈಸ್ಕೂಲ್‌ ಪ್ರಥಮ

KannadaprabhaNewsNetwork |  
Published : Nov 19, 2024, 12:47 AM IST
18ಎಚ್‌ವಿಆರ್‌1-  | Kannada Prabha

ಸಾರಾಂಶ

ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಭಗತ್‌ಸಿಂಗ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರಾತ್ಯಕ್ಷಿಕೆ ಸಿದ್ಧಪಡಿಸಿದ್ದ ಸವಣೂರಿನ ಬಿ.ಇ.ಎಸ್ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಮೊದಲ ಸ್ಥಾನ ಲಭಿಸಿದೆ.

ಹಾವೇರಿ: ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಭಗತ್‌ಸಿಂಗ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರಾತ್ಯಕ್ಷಿಕೆ ಸಿದ್ಧಪಡಿಸಿದ್ದ ಸವಣೂರಿನ ಬಿ.ಇ.ಎಸ್ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಮೊದಲ ಸ್ಥಾನ ಲಭಿಸಿದೆ.

ಕಂಚಿನೆಗಳೂರಿನ ಸರ್ಕಾರಿ ಪ್ರೌಢಶಾಲೆ ಹಾಗೂ ಮೇವುಂಡಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಕ್ರಮವಾಗಿ ಎರಡನೇ ಹಾಗೂ ಮೂರನೇ ಸ್ಥಾನ ಪಡೆದರು.

ಸ್ಪರ್ಧೆಯಲ್ಲಿ ಜಿಲ್ಲೆಯ ೪೦ ಶಾಲೆಗಳ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದವು. ಮೊದಲ ಸ್ಥಾನ ಪಡೆದ ಶಾಲೆಗೆ ₹ 15 ಸಾವಿರ ನಗದು, ಎರಡನೇ ಸ್ಥಾನ ಪಡೆದ ಶಾಲೆಗೆ ₹10 ಸಾವಿರ ನಗದು ಹಾಗೂ ಮೂರನೇ ಸ್ಥಾನ ಪಡೆದ ಶಾಲೆಗೆ ₹ 5 ಸಾವಿರ ನಗದು ಬಹುಮಾನ ನೀಡಲಾಯಿತು.

ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ವಿಜ್ಞಾನ ಮಾದರಿಗಳನ್ನು ಡಯಟ್ ಉಪನಿರ್ದೇಶಕ ಗಿರೀಶ್ ಪದಕಿ ವೀಕ್ಷಿಸಿದರು. ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ, ಮಾತನಾಡಿ, ಮಕ್ಕಳು ತಮ್ಮ ಜೀವನದಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಭಗತ್‌ ಕಾಲೇಜಿನ ಎಂ.ಬಿ. ಸತೀಶ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪ್ರಕಾಶ ಶೆಟ್ಟಿ, ರತನ್ ಕಾಶಪ್ಪನವರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!