ನಾಳೆ, 15ರ ಭಾನುವಾರದಂದೂ ಬೆಸ್ಕಾಂ ಕ್ಯಾಶ್‌ ಕೌಂಟರ್‌ ಓಪನ್‌

KannadaprabhaNewsNetwork |  
Published : Sep 07, 2024, 01:37 AM IST
ಬೆಸ್ಕಾಂ | Kannada Prabha

ಸಾರಾಂಶ

ಬೆಸ್ಕಾಂ ವ್ಯಾಪ್ತಿಯಲ್ಲಿ 30 ದಿನದವರೆಗೆ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೆ ಒಳಗಾಗದಂತೆ ಸೆ. 8 ಮತ್ತು 15 ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರುತ್ತವೆ ಎಂದು ಬೆಸ್ಕಾಂ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಸ್ಕಾಂ ವ್ಯಾಪ್ತಿಯಲ್ಲಿ 30 ದಿನದವರೆಗೆ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೆ ಒಳಗಾಗದಂತೆ ಸೆ. 8 ಮತ್ತು 15 ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರುತ್ತವೆ ಎಂದು ಬೆಸ್ಕಾಂ ತಿಳಿಸಿದೆ.

ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದರೆ ಅಥವಾ ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದರೆ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್‌ 1ರಿಂದಲೇ ಈ ನಿಯಮ ಜಾರಿಯಾಗಿದೆ. ಹೀಗಾಗಿ ಆನ್‌ಲೈನ್‌ ಪೇಮೆಂಟ್‌ ಬಳಸದವರು ವಿದ್ಯುತ್‌ ಶುಲ್ಕ ಪಾವತಿಗೆ ಅನುವಾಗುವಂತೆ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸಬೇಕು. 30 ದಿನಗಳ ಬಳಿಕವೂ ₹100 ಕ್ಕಿಂತ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸಂರ್ಪಕಗಳನ್ನು ಮೀಟರ್‌ ರೀಡಿಂಗ್‌ಗೆ ಬರುವ ದಿನವೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಈ ಮೊದಲೇ ತಿಳಿಸಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ