ಕನ್ನಡಪ್ರಭ ವಾರ್ತೆ ಬೆಂಗಳೂರುನಗರದ ಪಾದಚಾರಿ ಮಾರ್ಗಗಳ ಮೇಲೊರುವ ಬೆಸ್ಕಾಂ ಸಂಬಂಧಿಸಿದ ಪರಿವರ್ತಕ (ಟ್ರಾನ್ಸ್‌ಫಾರ್ಮರ್) ಮತ್ತಿತರಗಳ ಸಾಮಗ್ರಿಗಳ ಸಮಗ್ರ ಪಟ್ಟಿ ಸಿದ್ಧಪಡಿಸಿ ಆ.1ರಿಂದ ಪ್ರಾರಂಭವಾಗುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನದ ವೇಳೆ ತೆರವುಗೊಳಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸ್ಥಳಾಂತರದ ಕುರಿತು ಅಲ್ಪಾವಧಿ ಹಾಗೂ ದೀರ್ಘಾವಧಿ ಯೋಜನೆಗಳನ್ನು ರೂಪಿಸಬೇಕು. ನಗರದ ಅಂದ ಕಾಪಾಡಿ, ಸುರಕ್ಷಿತ ಪಾದಚಾರಿ ಮಾರ್ಗ ನಿರ್ಮಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಪಾದಚಾರಿ ಮಾರ್ಗಗಳ ಮಧ್ಯಭಾಗದಲ್ಲಿರುವ ವಿದ್ಯುತ್ ಕಂಬಗಳನ್ನು ಬಳಸಿಕೊಂಡು ಕೆಲವರು ಸಂಪೂರ್ಣ ಮಾರ್ಗವನ್ನು ಅತಿಕ್ರಮಿಸಿದ್ದಾರೆ. ಖಾಸಗಿ ಅಪಾರ್ಟ್‌ಮೆಂಟ್‌ಗಳು ಅಳವಡಿಸಿಕೊಂಡಿರುವ ಟ್ರಾನ್ಸ್‌ಫಾರ್ಮರ್‌ಗಳು ಪಾದಚಾರಿ ಮಾರ್ಗ/ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ್ದು, ಅಂತಹವುಗಳನ್ನು ಪಟ್ಟಿ ಮಾಡಿಕೊಂಡಿ ಅವರ ಜಾಗದಲ್ಲಿಯೇ ಅಳವಡಿಸಿಕೊಳ್ಳಲು ಸೂಚನೆ ನೀಡಬೇಕು. ಬೆಸ್ಕಾಂನ ಎಲ್ಲ ಯುಟಿಲಿಟಿಗಳನ್ನು ಸ್ಥಳಾಂತರಿಸಲು ವಿಶೇಷ ಅಭಿಯಾನ ಹಮ್ಮಿಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸೂಚಿಸಿದರು.
ಭವಿಷ್ಯದ ಯೋಜನೆ ವ್ಯವಸ್ಥಿತವಾಗಿರಲಿ:ಟ್ರಾನ್ಸ್‌ಫಾರ್ಮರ್‌ಗಳು ನಾಗರಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ವಿನ್ಯಾಸಗೊಳಿಸಬೇಕು. ಜನರಿಗೆ ತೊಂದರೆಯಾಗದಂತೆ ನಗರದಾದ್ಯಂತ ಒಂದೇ ಮಾದರಿಯ ವಿನ್ಯಾಸವನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಸಚಿವರು ಬೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ಥಳ ಬದಲಾಗಿದೆ: ಬೆಸ್ಕಾಂ